ಕೊಪ್ಪಳ:ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು ಸೋಂಕು ಹರಡುವಿಕೆ ನಿಯಂತ್ರಿಸಲು ಜನ ಸಹಕರಿಸಬೇಕು. ಗ್ರಾಮೀಣ ಮಟ್ಟದಲ್ಲಿಯೂ ಶಾಲಾ ಕಟ್ಟಡಗಳನ್ನು ಬಳಸಿಕೊಂಡು ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಹೇಳಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಡಿಸಿ , ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆ ಮಾಡವ ಉದ್ದೇಶದಿಂದ ಗ್ರಾಮೀಣ ಭಾಗದಲ್ಲಿಯೂ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ. ಇದರಿಂದ ಮನೆಯಲ್ಲಿ ಪ್ರತ್ಯೇಕ ಸೌಲಭ್ಯವಿಲ್ಲದವರಿಗೆ ಸ್ಥಳೀಯರಿಗೆ ಅನುಕೂಲವಾಗಲಿದೆ. ಈಗಾಗಲೇ ಸುಮಾರು 400 ಕ್ಕೂ ಹೆಚ್ಚು ಜನರನ್ನು ಕೋವಿಡ್ ಕೇರ್ ಸೆಂಟರ್ಗೆ ಸ್ಥಳಾಂತರಿಸಲಾಗಿದೆ. ಸುಮಾರು 2000 ಸೋಂಕಿತರನ್ನು ಸ್ಥಳಾಂತರುವ ಕಾರ್ಯ ನಡೆದಿದೆ.
ಇನ್ನೂ ಜಿಲ್ಲಾಸ್ಪತ್ರೆಯಲ್ಲಿ 1000 ಎಲ್ಪಿಎಂ ಸಾಮರ್ಥ್ಯದ ಹಾಗೂ ಗಂಗಾವತಿ ಸರ್ಕಾರಿ ಆಸ್ಪತ್ರೆಯಲ್ಲಿ 500 ಎಲ್ಪಿಎಂ ಸಾಮರ್ಥ್ಯದ ಆಕ್ಸಿಜನ್ ಉತ್ಪಾದನಾ ಪ್ಲಾಂಟ್ ನಿರ್ಮಾಣ ಕಾರ್ಯ ನಡೆದಿದೆ. ಇವುಗಳ ಕಾಮಗಾರಿ ಆದಷ್ಟು ಬೇಗ ಪೂರ್ಣಗೊಳಿಸಲಾಗುತ್ತದೆ. ಇದರಿಂದ ಆಕ್ಸಿಜನ್ ಕೊರತೆ ಉಂಟಾಗದೇ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಅನುಕೂಲವಾಗಲಿದೆ ಎಂದರು. ಜಿಲ್ಲೆಯಲ್ಲಿ ಕೋವಿಡ್ನಿಂದ ತಂದೆ-ತಾಯಿ ಮೃತಪಟ್ಟು ಮಕ್ಕಳು ಅನಾಥವಾದ ಪ್ರಕರಣಗಳಿಲ್ಲ. ಒಂದು ವೇಳೆ, ಅಂತಹ ಪ್ರಕರಣಗಳಿದ್ದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಓದಿ: ಕಂದಕಕ್ಕೆ ಬಿದ್ದಿದ್ದ ಕಾಡಾನೆಯ ರಕ್ಷಣೆ.. ಮೇಲಕ್ಕೆ ಬಂದು ಜೆಸಿಬಿ ಜೊತೆ ಸಲಗ ಗುದ್ದಾಟ!