ETV Bharat / state

ಗವಿಮಠದ ಹಾಸ್ಟೆಲ್​ನಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲು ಒಪ್ಪಿಗೆ - ಗವಿಮಠದ ಹಾಸ್ಟೆಲ್​

ಕೊರೊನಾ ವ್ಯಾಪಕವಾಗಿ ಹರಡುತ್ತಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆ ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮೀಜಿ ಮಠದ ಹಾಸ್ಟೆಲ್​ನಲ್ಲಿ 100 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಆರಂಭಿಸಲು ಒಪ್ಪಿಗೆ ನೀಡಿದ್ದಾರೆ.

Covid Care Center start at Gavimath Hostel
ಗವಿಮಠದ ಹಾಸ್ಟೆಲ್​ನಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲು ಒಪ್ಪಿಗೆ
author img

By

Published : May 7, 2021, 12:14 PM IST

ಕೊಪ್ಪಳ: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ನಗರದ ಶ್ರೀ ಗವಿಮಠದ ಹಾಸ್ಟೆಲ್​ನಲ್ಲಿ 100 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಲು ಮುಂದಾಗಿದೆ. ಈ ವಿಷಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಕೊರೊನಾ ವ್ಯಾಪಕವಾಗಿ ಹರಡುತ್ತಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆ ಸಚಿವ ಬಿ.ಸಿ.ಪಾಟೀಲ್ ಸೇರಿದಂತೆ ಸಂಸದರು, ಶಾಸಕರು ಶ್ರೀಗಳನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿರುವ ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮೀಜಿ, ಮಠದ ಹಾಸ್ಟೆಲ್​ನಲ್ಲಿ 100 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಆರಂಭಿಸಲು ಒಪ್ಪಿಗೆ ನೀಡಿದ್ದಾರೆ. ಅಲ್ಲದೇ ಕೋವಿಡ್ ಕೇರ್ ಸೆಂಟರ್​ಗೆ ಬೇಕಾದ ಎಲ್ಲ ಸೌಲಭ್ಯ, ಆಯುರ್ವೇದ ಕಾಲೇಜಿನ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯನ್ನು ಒದಗಿಸುವುದಾಗಿ ತಿಳಿಸಿದ್ದಾರೆ.

ಸಂಕಷ್ಟ ಸಂದರ್ಭದಲ್ಲಿ ಶ್ರೀಗಳು ಕೈಜೋಡಿಸಿರುವುದಕ್ಕೆ ಧನ್ಯವಾದ ಅರ್ಪಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಸಚಿವ ಬಿ.ಸಿ.ಪಾಟೀಲ್ ಬರೆದುಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.