ಕೊಪ್ಪಳ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಸಾವಿನ ಸರಣಿ ಮುಂದುವರಿದಿದ್ದು ನಿನ್ನೆ ತಡರಾತ್ರಿ ಸೋಂಕಿತ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
ಜಿಲ್ಲೆಯ ಗಂಗಾವತಿ ನಗರದ ನಿವಾಸಿ 40 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ದಾಖಲಾದ ಒಂದು ಗಂಟೆಯೊಳಗೆ ಸಾವನ್ನಪ್ಪಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಈ ಮಹಿಳೆಯನ್ನು ನಿನ್ನೆ ರಾತ್ರಿ ಕೊಪ್ಪಳದ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು.
ಮಹಿಳೆಗೆ ಕೊರೊನಾ ಪಾಸಿಟಿವ್ ಇರೋದು ಟ್ರೂನ್ಯಾಟ್ನಲ್ಲಿ ದೃಢಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿನ್ನೆ ಒಂದೇ ದಿನ ಮೂರು ಜನರು ಅಸುನೀಗಿದ್ದರು. ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವುದು ಜಿಲ್ಲೆಯ ಜನರಲ್ಲಿ ಭೀತಿ ಹೆಚ್ಚಿಸುತ್ತಿದೆ.