ಗಂಗಾವತಿ: ನಗರಸಭೆಯ 158 ಪೌರಕಾರ್ಮಿಕರ ಪೈಕಿ 53 ಜನರಿಗೆ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಿದ್ದರಾಮೇಶ್ವರ ನೇತೃತ್ವದಲ್ಲಿ ಕೋವಿಡ್-19 ರ್ಯಾಂಡಮ್ ಟೆಸ್ಟ್ ಮಾಡಲಾಗಿದ್ದು, ಈ ಪೈಕಿ ಒಬ್ಬರಿಗೆ ಪಾಸಿಟಿವ್ ಕಂಡು ಬಂದಿದೆ.
ನಗರದಲ್ಲಿ ಮಾತನಾಡಿದ ಸಿದ್ದರಾಮೇಶ್ವರ, ಕೊರೊನಾ ಫ್ರಂಟ್ಲೈನ್ ವಾರಿಯರ್ಸ್ ರೂಪದಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರಿಗೆ ಆಗಾಗ ಆರೋಗ್ಯ ತಪಾಸಣೆ ಮಾಡಿಸುವ ಮೂಲಕ ಅವರ ಆರೋಗ್ಯ ಕಾಪಾಡಲು ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದರು.
ಈಗಾಗಲೇ ಕಳೆದ ನಾಲ್ಕೈದು ತಿಂಗಳಿಂದ ನಿರಂತರವಾಗಿ ಆರೋಗ್ಯ ಪರೀಕ್ಷೆ ನಡೆಸಲಾಗುತ್ತಿದೆ. ಇದರ ಭಾಗವಾಗಿ ಮೊದಲ ಹಂತದಲ್ಲಿ 53 ಜನರಿಗೆ ಈಗ ಕೋವಿಡ್ ಟೆಸ್ಟ್ ಮಾಡಿಸಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಜನರಿಗೆ ಟೆಸ್ಟ್ ಮಾಡಿಸಲಾಗುವುದು ಎಂದು ತಿಳಿಸಿದರು.