ETV Bharat / state

ವಿವಿಧ ಬೇಡಿಕೆ ಈಡೇರಿಗೆ ಆಗ್ರಹಿಸಿ ಸಿಪಿಐ(ಎಂ) ಕಾರ್ಯಕರ್ತರ ಪ್ರತಿಭಟನೆ - Koppal protest news

ಕೊರೊನಾ ಹಿನ್ನೆಲೆಯಲ್ಲಿ ಸಂಕಷ್ಟಕ್ಕೀಡಾದ, ಆದಾಯ ತೆರಿಗೆ ವ್ಯಾಪ್ತಿಗೆ ಬಾರದ ಎಲ್ಲಾ ಕುಟುಂಬಗಳಿಗೆ ಮಾಸಿಕ ತಲಾ 7,500 ರೂ. ಪರಿಹಾರ, ಸಮಗ್ರ ಪಡಿತರ ವಿತರಣೆ ಸೇರಿದಂತೆ ಇತರೆ ಬೇಡಿಕೆಗಳ ಈಡೇರಿಸಬೇಕೆಗೆ ಒತ್ತಾಯಿಸಿ ಸಿಪಿಐ(ಎಂ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

CPIM activists protest demanding various demands
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಿಪಿಐಎಂ ಕಾರ್ಯಕರ್ತರ ಪ್ರತಿಭಟನೆ
author img

By

Published : Sep 18, 2020, 5:14 PM IST

ಕೊಪ್ಪಳ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಿಪಿಐ(ಎಂ) ಕಾರ್ಯಕರ್ತರು ನಗರದ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದರು.

ದೇಶದ ಸಮಗ್ರತೆ ಮತ್ತು ಐಕ್ಯತೆಯನ್ನು ಬಲಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ರಾಜ್ಯದಲ್ಲಿ ಅತಿವೃಷ್ಠಿಯಿಂದ ಜನರು ತತ್ತರಿಸಿದ್ದಾರೆ. ಸರ್ಕಾರಗಳು ಜನತೆಯ ಹಿತ ಕಾಯುವಲ್ಲಿ ವಿಫಲವಾಗಿವೆ. ಭೂ ಸುಧಾರಣೆ ಕಾಯ್ದೆ, ಕಾರ್ಮಿಕ ಕಾಯ್ದೆ, ಎಪಿಎಂಸಿ ಕಾಯ್ದೆ ಸೇರಿದಂತೆ ಹಲವಾರು ಕಾಯ್ದೆಗಳನ್ನು ವಾಪಾಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ರಾಜ್ಯಕ್ಕೆ ಬರಬೇಕಾದ ಜಿಎಸ್​ಟಿ ಹಣ, ಬಾಕಿ ಅನುದಾನ, ಕೋವಿಡ್ ಪರಿಹಾರ ನಿಧಿಯನ್ನು ಕೇಂದ್ರ ನೀಡಬೇಕು. ಕೊರೊನಾ ಹಿನ್ನೆಲೆಯಲ್ಲಿ ಸಂಕಷ್ಟಕ್ಕೀಡಾದ, ಆದಾಯ ತೆರಿಗೆ ವ್ಯಾಪ್ತಿಗೆ ಬಾರದ ಎಲ್ಲಾ ಕುಟುಂಬಗಳಿಗೆ ಮಾಸಿಕ ತಲಾ 7,500 ರೂ. ಪರಿಹಾರ, ಸಮಗ್ರ ಪಡಿತರ ವಿತರಣೆ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.