ಗಂಗಾವತಿ : ತಾಲೂಕಿನ ಚಿಕ್ಕರಾಂಪೂರದ ಅಂಜನಾದ್ರಿಯಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದು ಜಾಗರಣ ವೇದಿಕೆಯು ಒತ್ತಾಯಿಸಿರುವುದಕ್ಕೆ ಸಿಪಿಐಎಂ ಪಕ್ಷ ಖಂಡನೆ ವ್ಯಕ್ತಪಡಿಸಿದೆ.
ಸಮಾಜದ ಸ್ವಾಸ್ಥ್ಯ ಹದಗೆಡಿಸುವ ಮತೀಯ ಸಂಘಟನೆಗಳ ಮನವಿಗೆ ಕಿವಿಗೊಡಬಾರದು. ಎಲ್ಲಾ ಧರ್ಮದವರಿಗೆ ಎಲ್ಲಾ ಪ್ರಾರ್ಥನಾ ಮಂದಿರ, ಮಸೀದಿ, ಚರ್ಚ್ ಮುಂದೆ ವ್ಯಾಪಾರ ನಡೆಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ನಿರುಪಾದಿ ಬೆಣಕಲ್ ನೇತೃತ್ವದಲ್ಲಿ ಸಿಪಿಐಎಂ ಕಾರ್ಯಕರ್ತರು ತಹಶೀಲ್ದಾರ್ ಕಚೇರಿ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಡಿ.5ರಂದು ನಡೆಯುವ ಹನುಮ ಜಯಂತಿ ಸಂದರ್ಭದಲ್ಲಿ ಕೆಲ ಸಂಘಟನೆಗಳು ಕೋಮುಗಲಭೆ ಸೃಷ್ಟಿಸುವ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಎಚ್ಚರಿಕೆ ವಹಿಸುವಂತೆ ಸಿಪಿಐಎಂ ಒತ್ತಾಯಿಸಿದೆ.
ಇದನ್ನೂ ಓದಿ : ಹನುಮ ಜಯಂತಿ: ಅನ್ಯ ಧರ್ಮದ ವ್ಯಾಪಾರಿಗಳಿಗೆ ಅವಕಾಶ ನೀಡದಂತೆ ಒತ್ತಾಯ