ಗಂಗಾವತಿ : ಸರ್ಕಾರದ ಅನುದಾನದಲ್ಲಿ ಮಾಡುವ ಕಾಮಗಾರಿಗಳಲ್ಲಿ ಗುಣಮಟ್ಟದ ಕೊರತೆ ಕಂಡು ಬಂದರೆ ಸಾರ್ವಜನಿಕರು ಅಂತಹ ಗುತ್ತಿಗೆದಾರರ ಮೇಲೆ ಕ್ರಿಮಿನಲ್ ಕೇಸು ದಾಖಲಿಸಲು ಅವಕಾಶವಿದೆ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು.
ತಾಲ್ಲೂಕಿನ ಬಸವಪಟ್ಟಣ, ಅರಳಿಹಳ್ಳಿ ಹಾಗೂ ವೆಂಕಟಗಿರಿ ಗ್ರಾಮಗಳಲ್ಲಿ 1.31 ಕೋಟಿ ಮೊತ್ತದಲ್ಲಿ ಟಿಎಸ್ಪಿ ಹಾಗೂ ಸಿಪಿ ಯೋಜನೆ ಅಡಿಯಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕೆಲಸ ಹಾಗೂ ಸಾರ್ವಜನಿಕ ಕಾಮಗಾರಿಗಳಲ್ಲಿ ಕಳಪೆ ಗುಣಮಟ್ಟ ಎಂಬ ಆರೋಪ ಸಹಜವಾಗಿ ಕೇಳಿ ಬರುತ್ತಿದೆ. ಈ ಹಿನ್ನೆಲೆ ಗುಣಮಟ್ಟದ ಕಾಮಗಾರಿ ಮಾಡಿಸಿಕೊಳ್ಳಲು ಗ್ರಾಮದ ಯುವಕರು ಮುಂದಾಗಬೇಕು. ಅದು ಅವರ ಹಕ್ಕು ಎಂದರು.