ETV Bharat / state

ಖಾಸಗಿ ಆಸ್ಪತ್ರೆಗಳಲ್ಲಿ ಸಹ ಕೊರೊನಾ ಚಿಕಿತ್ಸೆ ನೀಡುವಂತೆ ಡಿಸಿ ಸೂಚನೆ

ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು, ಖಾಸಗಿ ಆಸ್ಪತ್ರೆಗಳು ಸಹ ಶೇಕಡಾ 50 ರಷ್ಟು ಬೆಡ್ ಗಳನ್ನು ಸೋಂಕಿತರ ಚಿಕಿತ್ಸೆಗೆ ಮೀಸಲಿರಿಸಬೇಕು ಎಂದು ಆದೇಶ ಹೊರಡಿಸಿದ್ದಾರೆ.

author img

By

Published : Aug 1, 2020, 4:29 PM IST

Vikas kishor
Vikas kishor

ಕೊಪ್ಪಳ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಖಾಸಗಿ ಆಸ್ಪತ್ರೆಗಳು ಸಹ ಶೇಕಡಾ 50 ರಷ್ಟು ಬೆಡ್​ಗಳನ್ನು ಸೋಂಕಿತರ ಚಿಕಿತ್ಸೆಗೆ ಮೀಸಲಿಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ‌.

ಈ ಕುರಿತಂತೆ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು, ಜಿಲ್ಲೆಯಲ್ಲಿ ಐಸಿಯು, ವೆಂಟಿಲೇಟರ್ ಹಾಗೂ ಆಕ್ಸಿಜನ್ ವ್ಯವಸ್ಥೆ ಹೊಂದಿರುವ ಆಸ್ಪತ್ರೆಗಳ ಮುಖಂಡರೊಂದಿಗೆ ಈಗಾಗಲೇ ಸಭೆ ನಡೆಸಿ, ಶೇಕಡಾ 50 ರಷ್ಟು ಬೆಡ್​ಗಳನ್ನು ಕೋವಿಡ್-19 ಚಿಕಿತ್ಸೆಗೆ ಮೀಸಲಿರಿಸುವಂತೆ ಸೂಚಿಸಲಾಗಿದೆ. ಆದರೂ ಕೆಲ ಆಸ್ಪತ್ರೆಗಳು ಈ ಬಗ್ಗೆ ಉದಾಸೀನ ಮಾಡಿವೆ. ಇದು ನಿಜಕ್ಕೂ ವಿಷಾದನೀಯ ಎಂದಿದ್ದಾರೆ.

ಜಿಲ್ಲೆಯಲ್ಲಿ ನೋಂದಣಿಯಾಗಿರುವ ಖಾಸಗಿ ಆಸ್ಪತ್ರೆಗಳ ಪೈಕಿ ಒಟ್ಟು 27 ಆಸ್ಪತ್ರೆಗಳನ್ನು ಜಿಲ್ಲಾಡಳಿತ ಗುರುತಿಸಿದೆ. ರಾಷ್ಟ್ರೀಯ ವಿಪತ್ತು‌ ನಿರ್ವಹಣಾ ಕಾಯ್ದೆ 2005 ರ ಕಲಂ 30, 33 ಮತ್ತು 34 ರ ಅಡಿಯಲ್ಲಿ ಕೊಪ್ಪಳ ಹಾಗೂ ಗಂಗಾವತಿಯಲ್ಲಿ ಗುರುತಿಸಲಾಗಿರುವ ಖಾಸಗಿ ಆಸ್ಪತ್ರೆಗಳು ಆಗಸ್ಟ್ 2‌ ರಂದು ಬೆಳಿಗ್ಗೆ 8 ಗಂಟೆಯೊಳಗಾಗಿ ತಮ್ಮ ಆಸ್ಪತ್ರೆಯಲ್ಲಿ ಶೇಕಡಾ 50 ರಷ್ಟು ಬೆಡ್ ಗಳನ್ನು ಕೋವಿಡ್ -19 ಚಿಕಿತ್ಸೆಗಾಗಿ ಮೀಸಲಿರಿಸಬೇಕು. ಒಂದು ವೇಳೆ ನಿರ್ಲಕ್ಷ್ಯ ತೋರಿದರೆ ಅಂತಹ ಆಸ್ಪತ್ರೆಗಳ ಮೇಲೆ ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ‌.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.