ಗಂಗಾವತಿ: ಸತತ ಎರಡನೇ ಬಾರಿಗೆ ಕೇಂದ್ರ ಆರೋಗ್ಯ ಸಚಿವಾಲಯ ನೀಡುವ ಕಾಯಕಲ್ಪ ಪ್ರಶಸ್ತಿಯನ್ನ ನಗರದ ಉಪ ವಿಭಾಗ ಸರ್ಕಾರಿ ಆಸ್ಪತ್ರೆ ಪಡೆದುಕೊಂಡ ಹಿನ್ನೆಲೆ ಆಸ್ಪತ್ರೆಗೆ ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್ ಭೇಟಿ ನೀಡಿ ಸಿಬ್ಬಂದಿಯನ್ನು ಹುರಿದುಂಬಿಸಿದರು.
ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ, ಚಿಕಿತ್ಸೆಯ ಗುಣಮಟ್ಟದ ಬಗ್ಗೆ ಒಳರೋಗಿಗಳಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಕೆಲವರು ಸ್ವಚ್ಛತೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ರು. ಬಳಿಕ ಸ್ಥಳಕ್ಕೆ ಆಡಳಿತ ವೈದ್ಯಾಧಿಕಾರಿಯನ್ನು ಕರೆಸಿಕೊಂಡ ಜಿಲ್ಲಾಧಿಕಾರಿ, ಈ ಬಗ್ಗೆ ಗಮನ ಹರಿಸುವಂತೆ ಸೂಚನೆ ನೀಡಿದ್ರು.
ಬಳಿಕ ಆಸ್ಪತ್ರೆಯ ವಿವಿಧ ವಿಭಾಗದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಸಿಬ್ಬಂದಿಯನ್ನ ಸನ್ಮಾನಿಸಲಾಯಿತು.