ಕೊಪ್ಪಳ: ನಗರದ ಜಿಲ್ಲಾಸ್ಪತ್ರೆಯಲ್ಲಿರುವ ಕೋವಿಡ್ -19 ವಾರ್ಡ್ಗೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಇಂದು ಸಂಜೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಪಿಪಿಇ ಕಿಟ್ ಧರಿಸಿ ಕೋವಿಡ್-19 ವಾರ್ಡ್ಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು, ರೋಗಿಗಳ ಆರೋಗ್ಯ ವಿಚಾರಿಸುವುದರ ಜೊತೆಗೆ ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸಾ ಸೌಲಭ್ಯಗಳ ಕುರಿತು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಕಿಮ್ಸ್ ನಿರ್ದೇಶಕ ಡಾ.ವೈಜನಾಥ ಇಟಗಿ, ಪ್ರಭಾರಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪ್ರಕಾಶ ಕಬ್ಬರಗಿ ಸೇರಿದಂತೆ ಜಿಲ್ಲಾ ಆಸ್ಪತ್ರೆಯ ವೈದ್ಯರು ಇದ್ದರು.