ETV Bharat / state

ರಾಜ್ಯದ ಇಂಜಿನಿಯರಿಂಗ್ ಕಾಲೇಜುಗಳ ಸಮಸ್ಯೆಗಳಿಗೆ ಕ್ರಮ ಕೈಗೊಳ್ಳಲಾಗುವುದು ; ಅಶ್ವತ್ಥ್ ನಾರಾಯಣ - ಡಿಸಿಎಂ ಡಾ. ಅಶ್ವತ್ಥ್ ನಾರಾಯಣ ಸುದ್ದಿ

ರಾಜ್ಯದಲ್ಲಿನ ಇಂಜಿನಿಯರಿಂಗ್ ಕಾಲೇಜು, ಪದವಿ ಕಾಲೇಜುಗಳಲ್ಲಿ ಅನೇಕ ಸಮಸ್ಯೆಗಳಿವೆ‌. ಈ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನ ಮಾಡಲಾಗುವುದು‌. ಈ ಸಮಸ್ಯೆಗಳನ್ನ ಪರಿಹರಿಸಿದ ಬಳಿಕ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತದೆ..

DCM Ashwath narayan
ಅಶ್ವತ್ಥ್ ನಾರಾಯಣ
author img

By

Published : Nov 10, 2020, 9:19 PM IST

ಕೊಪ್ಪಳ : ರಾಜ್ಯದ ಇಂಜಿನಿಯರಿಂಗ್, ಪದವಿ, ಡಿಪ್ಲೋಮಾ ಕಾಲೇಜುಗಳಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ ಭರವಸೆ ನೀಡಿದರು.

ಇಂಜಿನಿಯರಿಂಗ್ ಕಾಲೇಜುಗಳ ಸಮಸ್ಯೆ ಕುರಿತು ಮಾತನಾಡಿದ ಡಿಸಿಎಂ

ಜಿಲ್ಲೆಯ ಕುಕನೂರು ತಾಲೂಕಿನ ತಳಕಲ್ ಗ್ರಾಮದಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪಿಜಿ ಸೆಂಟರ್ ಹಾಗೂ ಕೌಶಲ್ಯ ತರಬೇತಿ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು. ಉನ್ನತ ಶಿಕ್ಷಣ ಇಲಾಖೆಗೆ ₹5000 ಕೋಟಿ ಅನುದಾನ ಬರುತ್ತದೆ. ಇದರಲ್ಲಿ ಸುಮಾರು ₹4 ಸಾವಿರ ಕೋಟಿ ವೇತನಕ್ಕೆ ಬಳಕೆಯಾಗುತ್ತದೆ.

ಈಗ ಏಳನೇ ವೇತನ ಅನುಷ್ಠಾನವಾದರೆ ವೇತನ ಇನ್ನೂ ಹೆಚ್ಚಳವಾಗಲಿದೆ. ಇದಕ್ಕಾಗಿ ಹೆಚ್ಚಿನ ಅನುದಾನ ಮೀಸಲಿಡಬೇಕಾಗುತ್ತದೆ. ಉನ್ನತ ಶಿಕ್ಷಣದ ಅಭಿವೃದ್ಧಿ ಕಾರ್ಯಗಳಿಗೆ ₹200 ಕೋಟಿ ಸಿಗುತ್ತದೆ ಎಂದರು.

DCM Ashwath narayan
ಪಿಜಿ ಸೆಂಟರ್ ಉದ್ಘಾಟಿಸಿದ ಸಚಿವರು

ರಾಜ್ಯದಲ್ಲಿನ ಇಂಜಿನಿಯರಿಂಗ್ ಕಾಲೇಜು, ಪದವಿ ಕಾಲೇಜುಗಳಲ್ಲಿ ಅನೇಕ ಸಮಸ್ಯೆಗಳಿವೆ‌. ಈ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನ ಮಾಡಲಾಗುವುದು‌. ಈ ಸಮಸ್ಯೆಗಳನ್ನ ಪರಿಹರಿಸಿದ ಬಳಿಕ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ತಳಕಲ್​ನಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ ಕಟ್ಟಡ ಅತ್ಯಂತ ಅದ್ಭುತವಾಗಿದೆ. ಇಂತಹ ಕಟ್ಟಡ ಹೊಂದಿದ್ದರೂ ಸಹ ಬೋಧಕ, ಬೋಧಕೇತರ ಸೇರಿ ಇನ್ನುಳಿದ ಸಿಬ್ಬಂದಿಗಳ ನೇಮಕ ಮತ್ತು ಇನ್ನಿತರ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಬಿ ಸಿ ಪಾಟೀಲ್, ಸಂಸದ ಸಂಗಣ್ಣ ಕರಡಿ, ಶಾಸಕರಾದ ಹಾಲಪ್ಪ ಆಚಾರ್, ಪರಣ್ಣ ಮುನವಳ್ಳಿ, ಅಮರೇಗೌಡ ಪಾಟೀಲ್ ಭಯ್ಯಾಪುರ ಸೇರಿದಂತೆ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.