ಕುಷ್ಟಗಿ (ಕೊಪ್ಪಳ): ತಾಲೂಕಿನ ಮುದೇನೂರು ಗ್ರಾಮದ ಶ್ರೀ ಚಂದ್ರಶೇಖರಸ್ವಾಮಿ ಮಠದ ಬಳಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿಗೆ ಆರೋಗ್ಯ ಸಮಸ್ಯೆ ಉಲ್ಬಣಿಸಿದ್ದನ್ನು ಕಂಡ ಸ್ಥಳೀಯರು ತಾವರಗೇರಾ ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣ ಆ್ಯಂಬ್ಯುಲೆನ್ಸ್ ತರಿಸಿ ಕುಷ್ಟಗಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಮೃತ ವ್ಯಕ್ತಿಯ ಕುರಿತು ಯಾವುದೇ ಮಾಹಿತಿ ತಿಳಿದು ಬಂದಿಲ್ಲ. ತಾವರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.