ಗಂಗಾವತಿ: ಕಳೆದ ವರ್ಷದ ಉದ್ಯೋಗ ಖಾತ್ರಿ ಯೋಜನೆಯಲ್ಲಿ ನಿರ್ವಹಿಸಿದ ಕಾಮಗಾರಿಗಳ ಸಂದರ್ಭದಲ್ಲಿ ಬಳಸಿಕೊಳ್ಳಲಾದ ಟ್ಯ್ರಾಕ್ಟರ್ ವಾಹನಗಳ ಬಾಡಿಗೆ ನೀಡಬೇಕು ಎಂದು ಒತ್ತಾಯಿಸಿ ವಾಹನ ಮಾಲೀಕರು, ರೈತರು, ಕೂಲಿಕಾರರು ಪ್ರತಿಭಟನೆ ನಡೆಸಿದರು.
ಇಲ್ಲಿನ ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕಚೇರಿ ಮುಂದೆ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರ ಹಾಗೂ ರೈತ ಸಂಘದಿಂದ ಪ್ರತಿಭಟನೆ ನಡೆಸಿ, ಕೂಡಲೇ ಬಾಕಿ ಹಣ ಪಾವತಿಸಬೇಕು ಎಂದು ಒತ್ತಾಯಿಸಿದರು.
2019-20ನೇ ಸಾಲಿನಲ್ಲಿ ಗುಂಡೂರು, ಹೊಸಳ್ಳಿ, ಚಿಕ್ಕಜಂತಕಲ್, ಢಣಾಪುರ ಹಾಗೂ ಮುಸ್ಟೂರು ಗ್ರಾಮ ಪಂಚಾಯತ್ಗಳಿಂದ ಕೈಗೊಳ್ಳಲಾಗಿದ್ದ ಕಾಮಗಾರಿಗಳಿಗೆ ವಾಹನಗಳನ್ನು ಬಳಕೆ ಮಾಡಿಕೊಳ್ಳಲಾಗಿತ್ತು. ಈಗಾಗಲೇ ನಾಲ್ಕಾರು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.