ಕೊಪ್ಪಳ: ಅಗ್ನಿ ಅವಘಡಗಳನ್ನು ತಪ್ಪಿಸುವ ಹಾಗೂ ಅಗ್ನಿ ನಂದಿಸುವ ಬಗ್ಗೆ ಅಗ್ನಿಶಾಮಕ ದಳದಿಂದ ಭಾಗ್ಯನಗರ ಪಟ್ಟಣದಲ್ಲಿ ಪ್ರಾತ್ಯಕ್ಷಿಕೆ ನೀಡಲಾಯಿತು.
ಭಾಗ್ಯನಗರದ ಸಂತೆ ಬಯಲಲ್ಲಿ ಹಮ್ಮಿಕೊಂಡಿದ್ದ ಈ ಪ್ರಾತ್ಯಕ್ಷಿಕೆಯನ್ನು ನೋಡಲು ನೂರಾರು ವಿದ್ಯಾರ್ಥಿಗಳು, ಸಾರ್ವಜನಿಕರು ನೆರೆದಿದ್ದರು. ಆಕಸ್ಮಿಕವಾಗಿ ಅಗ್ನಿ ಸಂಭವಿಸಿದ ಸಂದರ್ಭದಲ್ಲಿ ಅದನ್ನು ನಂದಿಸುವುದು ಹೇಗೆ, ಅಗ್ನಿ ಅವಘಡದಲ್ಲಿ ಸಿಲುಕಿಕೊಂಡವರನ್ನು ಹೇಗೆ ರಕ್ಷಿಸಬೇಕು ಹಾಗೂ ಅಗ್ನಿ ದುರಂತಗಳು ಸಂಭವಿಸುವುದನ್ನು ತಪ್ಪಿಸಲು ಕೈಗೊಳ್ಳಬಹುದಾದ ಮುಂಜಾಗೃತಾ ಕ್ರಮಗಳ ಕುರಿತಂತೆ ಅಗ್ನಿಶಾಮಕ ಸಿಬ್ಬಂದಿಗಳು ಪ್ರಾತ್ಯಕ್ಷಿಕೆಯ ಮೂಲಕ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡಿದರು.