ETV Bharat / state

ವಸತಿ ನಿಲಯಗಳಲ್ಲಿನ ಅವ್ಯವಸ್ಥೆ ಕಂಡು ಉಪ ಲೋಕಾಯುಕ್ತರು ಗರಂ - ಸಮಾಜ ಕಲ್ಯಾಣ ಇಲಾಖೆ

ಕೊಪ್ಪಳದ ವಸತಿ ನಿಲಯಗಳಲ್ಲಿನ ಅವ್ಯವಸ್ಥೆ ಕಂಡು ಉಪ ಲೋಕಾಯುಕ್ತ ನ್ಯಾ ಕೆ ಎನ್​ ಫಣೀಂದ್ರ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಸತಿ ನಿಲಯಗಳಲ್ಲಿನ ಅವ್ಯವಸ್ಥೆ ಕಂಡು ಉಪ ಲೋಕಾಯುಕ್ತರು ಅಸಮಾಧಾನ

author img

By ETV Bharat Karnataka Team

Published : Oct 8, 2023, 11:00 PM IST

ವಸತಿ ನಿಲಯಗಳಲ್ಲಿನ ಅವ್ಯವಸ್ಥೆ ಕಂಡು ಉಪ ಲೋಕಾಯುಕ್ತರು ಅಸಮಾಧಾನ

ಕೊಪ್ಪಳ : ಜಿಲ್ಲೆಯ ಪ್ರವಾಸದಲ್ಲಿರುವ ಉಪ ಲೋಕಾಯುಕ್ತ ನ್ಯಾ. ಕೆ. ಎನ್ ಫಣೀಂದ್ರ ಅವರು ಪೂರ್ವ ನಿಗದಿಯಂತೆ ಅ. 8 ರಂದು ಸಂಜೆ ವೇಳೆ ನಗರದ ವಿವಿಧ ಇಲಾಖೆಗಳ ವಸತಿ ನಿಲಯಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ಕೈಗೊಂಡರು. ಮೊದಲಿಗೆ ಡಾಲರ್ಸ್​ ಕಾಲೋನಿ ಹತ್ತಿರದಲ್ಲಿನ ಬಿಸಿಎಂ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿದರು. ಅಲ್ಲಿನ ಅಡುಗೆ ಕೋಣೆ, ಆಹಾರ ದಾಸ್ತಾನು ಕೋಣೆ, ವಿದ್ಯಾರ್ಥಿಗಳ ವಸತಿ ಗೃಹಗಳಿಗೆ ಭೇಟಿ ನೀಡಿ ವಸತಿ ನಿಲಯದ ಅಧಿಕಾರಿಗಳು, ವಾರ್ಡನ್​ಗಳು, ಅಡುಗೆದಾರರು ಮತ್ತು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.

ವಸತಿ ನಿಲಯದಲ್ಲಿ ನಮಗೆ ಕುಡಿಯುವ ನೀರು ಸಮರ್ಪಕವಾಗಿ ಸಿಗುತ್ತಿಲ್ಲ, ವಸತಿ ನಿಲಯ ಇಕ್ಕಟ್ಟಾಗಿರುವುದರಿಂದ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಾಗಿ, ಒಂದೇ ಕೋಣೆಯಲ್ಲಿ ಬಹಳಷ್ಟು ವಿದ್ಯಾರ್ಥಿನಿಯರನ್ನು ಹಾಕಿದ್ದರಿಂದಾಗಿ ನಮಗೆ ಅಭ್ಯಾಸ ಮಾಡಲು ತೊಂದರೆಯಾಗುತ್ತಿದೆ. ಓದಲು ವಸತಿ ನಿಲಯದಲ್ಲಿ ಸ್ಪರ್ಧಾತ್ಮಕ ಪುಸ್ತಕಗಳು ಇಲ್ಲ ಎಂದು ವಿದ್ಯಾರ್ಥಿನಿಯರು ಉಪ ಲೋಕಾಯುಕ್ತರ ಎದುರು ತಮ್ಮ ಅಳಲನ್ನು ತೋಡಿಕೊಂಡರು.

ತೀವ್ರ ಅಸಮಾಧಾನ: ವಸತಿ ನಿಲಯದಲ್ಲಿರುವ ಕೆಲವು ಅಡುಗೆದಾರರು ಸರಿಯಾಗಿ ಸ್ಪಂದಿಸುವುದಿಲ್ಲ. ಬಟ್ಟೆ ತೊಳೆಯುವ ಸ್ಥಳದಲ್ಲಿ ಗಲೀಜು ತುಂಬಿದೆ. ಕೆಲವು ಸೌಲಭ್ಯಗಳನ್ನು ಸಮರ್ಪಕವಾಗಿ ನೀಡುತ್ತಿಲ್ಲ ಎಂದು ವಿದ್ಯಾರ್ಥಿಗಳು ತಿಳಿಸಿದರು. ವಸತಿ ನಿಲಯದ ಹೊರಾಂಗಣದಲ್ಲಿ ಸುತ್ತಲು ಅನೈರ್ಮಲ್ಯ ಕಂಡು ಉಪ ಲೋಕಾಯುಕ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಪೌರಾಯುಕ್ತರಿಗೆ ಸೂಚನೆ: ನಗರಸಭೆಯಿಂದ ಈ ಬಿಸಿಎಂ ವಸತಿ ನಿಲಯಕ್ಕೆ ಮತ್ತೊಂದು ಪೈಪ್​ಲೈನ್ ಹಾಕಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಉಪ ಲೋಕಾಯುಕ್ತರು ನಗರಸಭೆ ಪೌರಾಯುಕ್ತರಿಗೆ ಸೂಚಿಸಿದರು.

ಯಾರು ಸಹ ಭೇಟಿ ನೀಡಿಲ್ಲ: ಕಿನ್ನಾಳ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಸಹ ಉಪ ಲೋಕಾಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಮಗೆ ಮಲಗಲು ಬೆಡ್ ವ್ಯವಸ್ಥೆ ಇಲ್ಲ. ಸ್ನಾನಕ್ಕೆ ಬಿಸಿ ನೀರು ಇಲ್ಲ, ಪುಸ್ತಕ ಇಲ್ಲ, ಸಾಂಬಾರು ನೀರಿನಂತಿರುತ್ತದೆ. ಎರಡು ವರ್ಷ ಆಯ್ತು ಯಾರು ಸಹ ವಸತಿ ನಿಲಯಕ್ಕೆ ಭೇಟಿ ನೀಡಿಲ್ಲ ಎಂದು ವಿದ್ಯಾರ್ಥಿಗಳು ಉಪ ಲೋಕಾಯುಕ್ತರ ಮುಂದೆ ಸಮಸ್ಯೆಗಳ ಪಟ್ಟಿಯನ್ನು ತೆರೆದಿಟ್ಟರು.

ಕಿಟಕಿ, ಬಾಗಿಲು, ಆಹಾರ ದಾಸ್ತಾನು ಗಮನಿಸಿ ಗರಂ ಆದ ಉಪ ಲೋಕಾಯುಕ್ತರು, ಮಕ್ಕಳು ತಾವೇ ಕಸ ಹೊಡೆದು, ಧೂಳು ಗುಡಿಸಿ ಕುಳಿತುಕೊಳ್ಳುವ ವ್ಯವಸ್ಥೆ ಬದಲಾಗಬೇಕು. ಆಹಾರದಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಸಮರ್ಪಕ ವ್ಯವಸ್ಥೆ ಮಾಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಿಗೆ ಉಪ ಲೋಕಾಯುಕ್ತರು ತಾಕೀತು ಮಾಡಿದರು.

ಜಿಲ್ಲಾಧಿಕಾರಿಗಳು, ಜಿಪಂ ಸಿಇಓ ಜತೆಗೆ ಚರ್ಚೆ: ವಸತಿ ನಿಲಯಗಳಲ್ಲಿನ ಅವ್ಯವಸ್ಥೆಯ ಬಗ್ಗೆ ಉಪಲೋಕಾಯುಕ್ತರು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಪಂ ಸಿಇಓ ರಾಹುಲ್‌ ರತ್ನಂ ಪಾಂಡೆಯ ಅವರೊಂದಿಗೆ ಚರ್ಚಿಸಿದರು.
ಇದನ್ನು ಸರಿಪಡಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಬೇಕು. ಕೂಡಲೇ ಎಲ್ಲಾ ವ್ಯವಸ್ಥೆಯನ್ನು ಸರಿಪಡಿಸಲು ಕ್ರಮ ವಹಿಸಬೇಕು ಎಂದು ಉಪ ಲೋಕಾಯುಕ್ತರು ಸೂಚಿಸಿದರು.

ನಿಯಮಿತ ಭೇಟಿ ಕೊಡಿ: ಸಮಾಜ ಕಲ್ಯಾಣ ಇಲಾಖೆ, ಬಿಸಿಎಂ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲೂಕುಮಟ್ಟದ ಅಧಿಕಾರಿಗಳು ಕಾಲಕಾಲಕ್ಕೆ ವಸತಿ ನಿಲಯಗಳಿಗೆ ಭೇಟಿ ನೀಡಿ ಮೇಲ್ವಿಚಾರಣೆ ನಡೆಸಬೇಕು ಎಂದು ಉಪ ಲೋಕಾಯುಕ್ತರು ಅಧಿಕಾರಿಗಳಿಗೆ ಇದೇ ವೇಳೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ವಿದ್ಯಾರ್ಥಿಗಳಿಗೆ ಸಲಹೆ: ಸರಿಯಾಗಿ ಅಧ್ಯಯನ ಮಾಡಿ ನೌಕರಿ ಪಡೆದುಕೊಳ್ಳಬೇಕು. ಸಮಾಜಕ್ಕೆ ಏನಾದರು ಕೊಡುಗೆ ಕೊಡಬೇಕು. ಪ್ರಾಮಾಣಿಕವಾದ ಜೀವನ ನಡೆಸಬೇಕು. ಯಾರಿಗೂ ಲಂಚಕೊಡಬಾರದು. ಲಂಚ ತೆಗೆದುಕೊಳ್ಳಬಾರದು ಎಂದು ಉಪ ಲೋಕಾಯುಕ್ತರು ವಿದ್ಯಾರ್ಥಿಗಳಿಗೆ ಸಲಹೆ ಮಾಡಿದರು.

ಪುಸ್ತಕ ಪೂರೈಸುವ ವ್ಯವಸ್ಥೆ: ವಸತಿ ನಿಲಯದ ವಿದ್ಯಾರ್ಥಿಗಳ ಕೋರಿಕೆಯನ್ನು ಪರಿಗಣಿಸಿ, ಯೋಜನೆಯಲ್ಲಿ ಅವಕಾಶ ಕಲ್ಪಿಸಿ ಸ್ಪರ್ಧಾತ್ಮಕ ಪುಸ್ತಕಗಳನ್ನು ಖರೀದಿಸಿ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಪೂರೈಸುವುದಾಗಿ ನಗರಸಭೆ ಪೌರಾಯುಕ್ತರಾದ ಗಣಪತಿ ಪಾಟೀಲ ಅವರು ಉಪ ಲೋಕಾಯುಕ್ತರಿಗೆ ತಿಳಿಸಿದರು.

ಇದನ್ನೂ ಓದಿ: ವಸತಿ ಶಾಲೆಗಳಲ್ಲಿ ಮಕ್ಕಳಿಗೆ ಉತ್ತಮ ಸೌಕರ್ಯ,ಗುಣಮಟ್ಟದ ಶಿಕ್ಷಣ ಸಿಗಬೇಕು: ಸಮಾಜ ಕಲ್ಯಾಣ ಸಚಿವ ಮಹದೇವಪ್ಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.