ETV Bharat / state

ಸೀಗೆ ಹುಣ್ಣಿಮೆ ಹಿನ್ನೆಲೆ: ಶ್ರೀ ಹುಲಿಗೆಮ್ಮದೇವಿ ಕ್ಷೇತ್ರಕ್ಕೆ ಹರಿದು ಬಂದ ಭಕ್ತ ಸಾಗರ...

author img

By

Published : Oct 31, 2020, 4:14 PM IST

ಸೀಗೆ ಹುಣ್ಣಿಮೆ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆ ಸೇರಿದಂತೆ ನಾನಾ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಶ್ರೀ ಹುಲಿಗೆಮ್ಮದೇವಿ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಆದರೆ ದೇವಸ್ಥಾನದೊಳಗೆ ಭಕ್ತರ ಪ್ರವೇಶಕ್ಕೆ ಅವಕಾಶವಿಲ್ಲದಿದ್ದರಿಂದ ದೇವಸ್ಥಾನದ ಹೊರಗಿನಿಂದಲೇ ಕಾಯಿ ಕರ್ಪೂರ‌ ಬೆಳಗಿ ತೆರಳುತ್ತಿದ್ದಾರೆ.

koppal
ಶ್ರೀ ಹುಲಿಗೆಮ್ಮದೇವಿ ದೇವಸ್ಥಾನ

ಕೊಪ್ಪಳ: ತಾಲೂಕಿನ ಐತಿಹಾಸಿಕ ಸುಪ್ರಸಿದ್ಧ ಹುಲಗಿಯ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನಕ್ಕೆ ಇಂದು ಭಕ್ತ ಸಾಗರವೇ ಹರಿದು ಬಂದಿದೆ. ಇಂದು ಸೀಗೆ ಹುಣ್ಣಿಮೆ ಹಿನ್ನೆಲೆಯಲ್ಲಿ ಜಿಲ್ಲೆ ಸೇರಿದಂತೆ ನಾನಾ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಶ್ರೀ ಹುಲಿಗೆಮ್ಮದೇವಿ ಕ್ಷೇತ್ರಕ್ಕೆ ಭೇಟಿ ನೀಡಿದರು.

ಕೊರೊನಾ ಭೀತಿ ಹಿನ್ನೆಲೆಯಲ್ಲಿ ಲಾಕ್​ಡೌನ್ ಸಂದರ್ಭದಿಂದಲೇ ದೇವಸ್ಥಾನಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ನವೆಂವರ್ 5 ರಿಂದ ದೇವಸ್ಥಾನವನ್ನು ಓಪನ್ ಮಾಡಲು ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ. ಇನ್ನು ದೇವಸ್ಥಾನದೊಳಗೆ ಭಕ್ತರ ಪ್ರವೇಶಕ್ಕೆ ಅವಕಾಶವಿಲ್ಲದಿದ್ದರೂ ಸಹ ಭಕ್ತರು ಕ್ಷೇತ್ರಕ್ಕೆ ಇಂದು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ದೇವಸ್ಥಾನದ ಹೊರಗಿನಿಂದಲೇ ಕಾಯಿ ಕರ್ಪೂರ‌ ಬೆಳಗಿ ತೆರಳುತ್ತಿದ್ದಾರೆ.

ಶ್ರೀ ಹುಲಿಗೆಮ್ಮದೇವಿ ಕ್ಷೇತ್ರಕ್ಕೆ ಸೀಗೆ ಹುಣ್ಣಿಮೆ ಹಿನ್ನೆಲೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.

ಶ್ರೀ ಹುಲಿಗೆಮ್ಮದೇವಿಗೆ ರಾಜ್ಯ ಸೇರಿದಂತೆ ನೆರೆಯ ಆಂಧ್ರಪ್ರದೇಶ, ತೆಲಂಗಾಣ ಹಾಗೂ ಮಹಾರಾಷ್ಟ್ರದಿಂದಲೂ ಭಕ್ತರು ಆಗಮಿಸುತ್ತಾರೆ. ಪ್ರತಿ ಶುಕ್ರವಾರ, ಮಂಗಳವಾರ ಹಾಗೂ ಹುಣ್ಣಿಮೆಯ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಇಂದು ಹುಣ್ಣಿಮೆಯಾಗಿದ್ದರಿಂದ ಶ್ರೀ ಕ್ಷೇತ್ರಕ್ಕೆ ಭಕ್ತ ಸಾಗರವೇ ಹರಿದು ಬಂದಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.