ಕೊಪ್ಪಳ: ಕೊಪ್ಪಳ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಪ್ರದೇಶದಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಕುಟುಂಬಗಳಿಗೆ ಆಹಾರ ಸಾಮಗ್ರಿ ವಿತರಿಸುವ ವಾಹನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಮತ್ತು ಸಂಸದ ಸಂಗಣ್ಣ ಕರಡಿ ಅವರು ಚಾಲನೆ ನೀಡಿದರು. ಸಂಗಣ್ಣ ಕರಡಿ ಅವರು ತಮ್ಮ ನಿವಾಸದ ಮುಂದೆ ಚಾಲನೆ ನೀಡಿದರು.
ಸಂಸದ ಸಂಗಣ್ಣ ಕರಡಿ ಕುಟುಂಬ ಇಷ್ಟು ದಿನ ನಗರ ಪ್ರದೇಶದಲ್ಲಿ ಬಡವರಿಗೆ ಆಹಾರ ಸಾಮಗ್ರಿ ಕಿಟ್ ವಿತರಿಸುತ್ತಿತ್ತು. ಈಗ ಕೊಪ್ಪಳ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಪ್ರದೇಶದಲ್ಲೂ ವಿಸ್ತರಿಸಲು ಮುಂದಾಗಿದೆ.
ಇರಕಲ್ಗಡ ಜಿಲ್ಲಾ ಪಂಚಾಯಿತಿ ಕ್ಷೇತ್ರ ಸೇರಿದಂತೆ ವಿಧಾನಸಭಾ ಕ್ಷೇತ್ರದ ಗ್ರಾಮಗಳ ಅರ್ಹ ಕುಟುಂಬಗಳಿಗೆ ಆಹಾರ ಸಾಮಗ್ರಿ ಕಿಟ್ ವಿತರಿಸಲಾಗುತ್ತಿದೆ. ಸುಮಾರು 8,000ಕ್ಕೂ ಅಧಿಕ ದಿನಸಿ ಸಾಮಗ್ರಿ ಕಿಟ್ ಅನ್ನು ವಿತರಣೆ ಮಾಡಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಅಮರೇಶ್ ಕರಡಿ ತಿಳಿಸಿದ್ದಾರೆ.