ETV Bharat / state

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಅಪರಾಧಿಗೆ ಶಿಕ್ಷೆ ಪ್ರಕಟ - ಕೊಪ್ಪಳ ನ್ಯೂಸ್​

ಶಿವಕುಮಾರ ಎಂಬಾತ 2016 ರಲ್ಲಿ ಆಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ‌ ಯತ್ನಿಸಿದ್ದ. ಈ ಕುರಿತಂತೆ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಆರೋಪಿಯ ವಿರುದ್ದ 2016, ಅಕ್ಟೋಬರ್ 1 ರಂದು ಪ್ರಕರಣ ದಾಖಲಾಗಿತ್ತು. ನಾಲ್ಕು ವರ್ಷಗಳ ನಂತರ ಆರೋಪ ಸಾಬೀತಾಗಿದ್ದು, ತಪ್ಪಿತಸ್ಥನಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.

ಆರೋಪಿ
author img

By

Published : Aug 22, 2019, 4:00 AM IST

ಕೊಪ್ಪಳ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಅಪರಾಧಿಗೆ ಶಿಕ್ಷೆ ಪ್ರಕಟಿಸಿದೆ. ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದ ಶಿವಕುಮಾರ ನ್ಯಾಯಾಲಯದಲ್ಲಿ ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡಿದ್ದಾನೆ.‌

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಗೆ ಶಿಕ್ಷೆ

ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರದಲ್ಲಿ ಜೆಸ್ಕಾಂ ಲೈನ್ ಮೈನ್ ಆಗಿ ಕೆಲಸ ಮಾಡುತ್ತಿದ್ದ ಶಿವಕುಮಾರ ಎಂಬಾತ 2016 ರಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ‌ ಯತ್ನಿಸಿದ್ದ. ಈ ಕುರಿತಂತೆ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಶಿವಕುಮಾರ್ ವಿರುದ್ದ 2016, ಅಕ್ಟೋಬರ್ 1 ರಂದು ಪ್ರಕರಣ ದಾಖಲಾಗಿತ್ತು. ನಾಲ್ಕು ವರ್ಷಗಳ ನಂತರ ಆರೋಪಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.

ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸಂಜೀವ ಕುಲಕರ್ಣಿ ಅವರು ಆರೋಪಿ ಶಿವಕುಮಾರ್​ಗೆ ಮೂರು ವರ್ಷ ಜೈಲುಶಿಕ್ಷೆ ಹಾಗೂ ಐದು ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸಾರ್ವಜನಿಕ ವಿಶೇಷ ಅಭಿಯೋಜಕಿ ಗೌರಮ್ಮ ದೇಸಾಯಿ ಅವರು ವಾದ ಮಂಡಿಸಿದ್ದರು.

Intro:Body:ಕೊಪ್ಪಳ:- ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದ ಆರೋಪಿಯು ನ್ಯಾಯಾಲಯದಲ್ಲಿ ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡಿದ್ದಾನೆ.‌ ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರದಲ್ಲಿ ಜೆಸ್ಕಾಂ ಲೈನ್ ಮೈನ್ ಆಗಿ ಕೆಲಸ ಮಾಡುತ್ತಿದ್ದ ಶಿವಕುಮಾರ ಎಂಬಾತ 2016 ರಲ್ಲಿ ಆಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ‌ ಯತ್ನಿಸಿದ್ದ. ಈ ಕುರಿತಂತೆ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಶಿವಕುಮಾರ್ ವಿರುದ್ದ 2016, ಅಕ್ಟೋಬರ್ 1 ರಂದು ಪ್ರಕರಣ ದಾಖಲಾಗಿತ್ತು. ನಾಲ್ಕೂ ವರ್ಷಗಳ ನಂತರ ಆರೋಪಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸಂಜೀವ ಕುಲಕರ್ಣಿ ಅವರು ಆರೋಪಿ ಶಿವಕುಮಾರ್ ಗೆ ಮೂರು ವರ್ಷ ಜೈಲುಶಿಕ್ಷೆ ಹಾಗೂ ಐದು ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸಾರ್ವಜನಿಕ ವಿಶೇಷ ಅಭಿಯೋಜಕಿ ಗೌರಮ್ಮ ದೇಸಾಯಿ ಅವರು ವಾದ ಮಂಡಿಸಿದ್ದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.