ಕೊಪ್ಪಳ: ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ದೊಡ್ಡನಗೌಡ ಪಾಟೀಲ್ರವರು ಪದಗ್ರಹಣ ಮಾಡಿದರು.
ನಗರದ ಶಿವಶಾಂತ ಮಂಗಲಭವನದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ದೊಡ್ಡನಗೌಡ ಪಾಟೀಲ್ ಅವರು ನೂತನ ಜಿಲ್ಲಾಧ್ಯಕ್ಷರಾಗಿ ಅಧಿಕಾರವಹಿಸಿಕೊಂಡರು. ಇನ್ನು ನಿಕಟಪೂರ್ವ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಸಿಂಗನಾಳ ಅವರು ಪಕ್ಷದ ಧ್ವಜವನ್ನು ಹಸ್ತಾಂತರಿಸಿದರು.
ಅಧಿಕಾರವಹಿಸಿಕೊಂಡ ಬಳಿಕ ಮಾತನಾಡಿದ ದೊಡ್ಡನಗೌಡ ಪಾಟೀಲ್, ಪಕ್ಷ ನೀಡಿರುವ ಜವಾಬ್ದಾರಿಯನ್ನು ಪ್ರಮಾಣಿಕತೆಯಿಂದ ಹಾಗೂ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯಲ್ಲಿ ಪಕ್ಷ ಸಂಘಟನೆಯನ್ನು ಬಲಗೊಳಿಸುವುದಾಗಿ ಹೇಳಿದರು.
ಸಂಸದ ಸಂಗಣ್ಣ ಕರಡಿ, ಶಾಸಕರಾದ ಹಾಲಪ್ಪ ಆಚಾರ್, ಪರಣ್ಣ ಮುನವಳ್ಳಿ, ಬಸವರಾಜ ದಡೇಸೂಗೂರು, ಮಾಜಿ ಶಾಸಕರಾದ ಜಿ. ವೀರಪ್ಪ ಕೆಸರಟ್ಟಿ, ಕೆ. ಶರಣಪ್ಪ, ಮುಖಂಡರಾದ ಚಂದ್ರು ಹಲಿಗೇರಿ, ಸಿ.ವಿ. ಚಂದ್ರಶೇಖರ್, ನಾಗರಾಜ ಬಿಲ್ಗಾರ ಸೇರಿದಂತೆ ಮೊದಲಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.