ಗಂಗಾವತಿ: ಮಾನಸಿಕವಾಗಿ ಇಷ್ಟೊಂದು ಕೆಳಮಟ್ಟದಲ್ಲಿರುವ ವ್ಯಕ್ತಿ ರಾಜ್ಯದ ಮುಖ್ಯಮಂತ್ರಿಯಾಗಿದ್ದರು ಎಂಬುದು ಬೇಸರ ತಂದಿದೆ. ರಾಜಕೀಯ ಮಾಡಬೇಕು. ಆದರೆ, ಎಲ್ಲದರಲ್ಲಿಯೂ ಅಲ್ಲವೆಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ ಕುಮಾರ ತಿರುಗೇಟು ನೀಡಿದ್ದಾರೆ.
ಇಲ್ಲಿನ ಶಾಸಕರ ಕಚೇರಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿಯವರು ಇಸ್ರೋ ವಿಜ್ಞಾನಿಗಳಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಇದನ್ನು ದೇಶವೇ ನೋಡಿದೆ ಎಂದು ಕುಟುಕಿದರು.
ಮೋದಿ ಕಾಲ್ಗುಣದಿಂದಾಗಿ ಇಸ್ರೋ ಬಾಹ್ಯಾಕಾಶದಲ್ಲಿ ಹಿನ್ನಡೆ ಅನುಭವಿಸಬೇಕಾಯಿತು ಎಂದು ಹೆಚ್ಡಿಕೆ ಈಚೆಗೆ ಹೇಳಿದ್ದರು. ಇದಕ್ಕೆ ಸಚಿವ ಸುರೇಶ್ ಕುಮಾರ್ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.
ಇನ್ನು ನೆರೆ ಪೀಡಿತ ಪ್ರದೇಶದ ಮಕ್ಕಳಿಗೆ ನೆರವು ನೀಡುವ ಉದ್ದೇಶಕ್ಕೆ ಸರ್ಕಾರ ಯೋಜನೆ ರೂಪಿಸುತ್ತಿದೆ. ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪುಸ್ತಕ ಹಾಗೂ ಸಮವಸ್ತ್ರ ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಚಿವರು ತಿಳಿಸಿದರು.