ETV Bharat / state

ಕೊಪ್ಪಳದ 149 ಗ್ರಾಮ ಪಂಚಾಯತ್‌ಗಳಿಗೆ ಎರಡು ಹಂತದಲ್ಲಿ ಚುನಾವಣೆ : ಜಿಲ್ಲಾಧಿಕಾರಿ - koppala gram panchayat Election

ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಆರ್​ಟಿಪಿಸಿಆರ್​​ನಲ್ಲಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಸುಸೂತ್ರವಾಗಿ ಚುನಾವಣೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ..

koppala
ವಿಕಾಸ್ ಕಿಶೋರ್ ಸುರಾಳ್ಕರ್
author img

By

Published : Dec 7, 2020, 1:23 PM IST

ಕೊಪ್ಪಳ : ಜಿಲ್ಲೆಯ ಒಟ್ಟು 153ರಲ್ಲಿ ನಾಲ್ಕು ಗ್ರಾಪಂ ಹೊರತುಪಡಿಸಿ 149 ಗ್ರಾಮ ಪಂಚಾಯತ್‌ಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಾಳ್ಕರ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಾಳ್ಕರ್..

ಗ್ರಾಮ ಪಂಚಾಯತ್ ಚುನಾವಣೆ ಸಿದ್ಧತೆ ಕುರಿತಂತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಜಿಲ್ಲೆಯ ನಾಲ್ಕು ಗ್ರಾಮ ಪಂಚಾಯತ್‌ಗಳ ಅವಧಿ ಪೂರ್ಣಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಆ ನಾಲ್ಕು ಗ್ರಾಮ ಪಂಚಾಯತ್‌ಗಳನ್ನು ಹೊರತುಪಡಿಸಿ ಉಳಿದ 149 ಗ್ರಾಪಂಗೆ ಚುನಾವಣೆ ನಡೆಯಲಿದೆ.

ಮೊದಲ ಹಂತದಲ್ಲಿ ಕೊಪ್ಪಳ, ಯಲಬುರ್ಗಾ ಹಾಗೂ ಕುಕನೂರು ತಾಲೂಕಿನ ಒಟ್ಟು 73 ಗ್ರಾಮ ಪಂಚಾಯತ್‌ಗಳಿಗೆ ಡಿಸೆಂಬರ್ 22 ರಂದು ಹಾಗೂ ಎರಡನೇ ಹಂತದಲ್ಲಿ ಗಂಗಾವತಿ, ಕುಷ್ಟಗಿ, ಕನಕಗಿರಿ ಹಾಗೂ ಕಾರಟಗಿ ತಾಲೂಕಿನ 76 ಗ್ರಾಮ ಪಂಚಾಯತ್‌ಗಳಿಗೆ ಡಿಸೆಂಬರ್ 27 ರಂದು ಮತದಾನ ನಡೆಯಲಿದೆ ಎಂದರು.

ರೈತರ ಪ್ರತಿಭಟನೆ: ಡಿ.9 ರಂದು ರಾಷ್ಟ್ರಪತಿಗಳನ್ನು ಭೇಟಿ ಮಾಡಲಿರುವ ಶರದ್​ ಪವಾರ್​

ಡಿಸೆಂಬರ್ 30ರಂದು ಮತ ಎಣಿಕೆ ನಡೆಯಲಿದೆ. ಜಿಲ್ಲೆಯಲ್ಲಿ ಒಟ್ಟು 8,28,726 ಮತದಾರರು ಇದ್ದಾರೆ‌. ಇದರಲ್ಲಿ 4,14,651 ಜ‌‌ನ ಪುರುಷರು, 4,14,051 ಜನ ಮಹಿಳೆಯರು ಹಾಗೂ 24 ಜನ ಇತರೆ ಮತದಾರರು ಇದ್ದಾರೆ. ಜಿಲ್ಲೆಯಲ್ಲಿ ಒಟ್ಟು 1,238 ಮತಗಟ್ಟೆಗಳಿದ್ದು 7,128 ಜನ ಚುನಾವಣೆಗೆ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಮೊದಲ ಹಂತದಲ್ಲಿ ನಡೆಯುವ ಗ್ರಾಮ ಪಂಚಾಯತ್‌ಗಳ ಚುನಾವಣೆಗೆ ಒಂದು ಅಧಿಸೂಚನೆ ಹೊರಡಿಸಲಾಗಿದೆ. ಡಿಸೆಂಬರ್ 11ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಡಿಸೆಂಬರ್ 12ರಂದು ನಾಮಪತ್ರ ಪರಿಶೀಲನೆ, ಡಿಸೆಂಬರ್ 14ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿರುತ್ತದೆ. ಡಿಸೆಂಬರ್ 22ರಂದು ಮತದಾನ ನಡೆಯಲಿದೆ ಎಂದರು.

ಎರಡನೇ ಹಂತದ ಗ್ರಾಮ ಪಂಚಾಯತ್‌ ಚುನಾವಣೆಗೆ ಡಿಸೆಂಬರ್ 11ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ಡಿಸೆಂಬರ್ 16ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಡಿಸೆಂಬರ್ 17ರಂದು ನಾಮಪತ್ರಗಳ ಪರಿಶೀಲನೆ, ಡಿಸೆಂಬರ್ 19ಕ್ಕೆ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕವಾಗಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದೆ ಎಂದು ಮಾಹಿತಿ ನೀಡಿದರು.

ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಆರ್​ಟಿಪಿಸಿಆರ್​​ನಲ್ಲಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಸುಸೂತ್ರವಾಗಿ ಚುನಾವಣೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.