ಕೊಪ್ಪಳ: ರಾಜ್ಯದಲ್ಲಿ ಎರಡನೇ ಹಂತದಲ್ಲಿ ನಡೆಯಲಿರುವ ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆ ಪ್ರಕ್ರಿಯೆಗಳು ನಾಳೆಯಿಂದ, ಅಂದರೆ ಮಾರ್ಚ್ 28ರಿಂದ ಪ್ರಾರಂಭಗೊಳ್ಳಲಿವೆ. ಈ ಬಗ್ಗೆ ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್ ಮಾಹಿತಿ ನೀಡಿದ್ದಾರೆ.
ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆ ಪ್ರಕ್ರಿಯೆಗಳು ಮಾರ್ಚ್ 28ರಿಂದ ಪ್ರಾರಂಭಗೊಳ್ಳಲಿದ್ದು, ಮಾ. 28ರಂದು ಬೆಳಗ್ಗೆ ಅಧಿಸೂಚನೆ ಪ್ರಕಟವಾಗಲಿದೆ. ನಾಳೆಯಿಂದ ಅಂದರೆ ಮಾರ್ಚ್ 28 ರಿಂದ ಏಪ್ರಿಲ್ 4 ರವರೆಗೆ ಸರ್ಕಾರಿ ರಜಾದಿನಗಳನ್ನು ಹೊರತುಪಡಿಸಿ, ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3ರವರೆಗೆ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ನಾಮಪತ್ರ ಸಲ್ಲಿಸಬಹುದಾಗಿದೆ.
ಏಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಇನ್ನು ಎಪ್ರಿಲ್ 8ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದ್ದು, ಅಂದು ಸಂಜೆ ನಾಲ್ಕು ಗಂಟೆಯ ಬಳಿಕ ಕಣದಲ್ಲಿ ಅಂತಿಮವಾಗಿ ಉಳಿದ ಅಭ್ಯರ್ಥಿಗಳಿಗೆ ಚಿಹ್ನೆ ನೀಡುವ ಪ್ರಕ್ರಿಯೆಗಳು ನಡೆಯಲಿದೆ. ಎಪ್ರಿಲ್ 23 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.
ಇನ್ನು ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಅಭ್ಯರ್ಥಿ ಹಾಗೂ ಅವರ ಜೊತೆಗೆ 4 ಜನರು ಮಾತ್ರ ಒಳಗೆ ಬರಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.