ETV Bharat / state

ಕ್ವಾರಂಟೈನ್​ನಲ್ಲಿ ಅನ್ನಾಹಾರಕ್ಕೆ ಪರದಾಟ: ಅಧಿಕಾರಿಗಳ ಸ್ಪಂದನೆ

ಸ್ಥಳಕ್ಕೆ ಭೇಟಿ ನೀಡಿದ ಗಂಗಾವತಿ ತಹಶೀಲ್ದಾರ್ ಚಂದ್ರಕಾಂತ್, ಅಲ್ಲಿನ ಸಿಬ್ಬಂದಿಯೊಂದಿಗೆ ಮಾತನಾಡಿ ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರು ಇತ್ಯಾದಿ ವ್ಯವಸ್ಥೆ ಮಾಡುವಂತೆ ತಾಕೀತು ಮಾಡಿದ್ದಾರೆ.

ETV Bharath impact story
ಕ್ವಾರಂಟೈನ್​ನಲ್ಲಿ ಅನ್ನಾಹಾರಕ್ಕೆ ಪರದಾಟ: ಅಧಿಕಾರಿಗಳ ಸ್ಪಂದನೆ
author img

By

Published : May 22, 2020, 9:20 PM IST

ಗಂಗಾವತಿ: ತಾಲೂಕಿನ ಹೇಮಗುಡ್ಡದ ಬಳಿ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅನ್ಯ ರಾಜ್ಯದಿಂದ ಜಿಲ್ಲೆಗೆ ಬಂದವರನ್ನು ಸಾಂಸ್ಥಿಕ ಕ್ವಾರಂಟೈನ್​ಗೆ ಒಳಪಡಿಸಲಾಗಿದ್ದು, ಆಹಾರಕ್ಕೆ ಪರದಾಡುತ್ತಿರುವ ಬಗ್ಗೆ 'ಈಟಿವಿ ಭಾರತ'ದಲ್ಲಿ ಪ್ರಸಾರವಾದ ಸುದ್ದಿಗೆ ಅಧಿಕಾರಿಗಳು ಸ್ಪಂದಿಸಿದ್ದಾರೆ.

ಕ್ವಾರಂಟೈನ್​ನಲ್ಲಿ ಅನ್ನಾಹಾರಕ್ಕೆ ಪರದಾಟ: ಅಧಿಕಾರಿಗಳ ಸ್ಪಂದನೆ

ಗುಣಮಟ್ಟದ ಆಹಾರ, ಕುಡಿಯುವ ನೀರು, ಕೇಂದ್ರದಲ್ಲಿನ ಅಸ್ವಚ್ಛತೆಯ ಬಗ್ಗೆ ಈಟಿವಿ ಭಾರತದಲ್ಲಿ ಸುದ್ದಿ ಪ್ರಸಾರವಾಗಿತ್ತು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ಸಂಬಂಧಿತ ಅಧಿಕಾರಿಗಳಿಗೆ ಅವ್ಯವಸ್ಥೆ ಸರಿಪಡಿಸುವಂತೆ ಸೂಚನೆ ನೀಡಿದ್ದಾರೆ.

ಈ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿದ ಗಂಗಾವತಿ ತಹಶೀಲ್ದಾರ್ ಚಂದ್ರಕಾಂತ್, ಅಲ್ಲಿನ ಸಿಬ್ಬಂದಿಯೊಂದಿಗೆ ಮಾತನಾಡಿ ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರು ಇತ್ಯಾದಿ ವ್ಯವಸ್ಥೆ ಮಾಡುವಂತೆ ತಾಕೀತು ಮಾಡಿದ್ದಾರೆ.

'ಆನೆಗೊಂದಿ ಗ್ರಾಮ ಪಂಚಾಯಿತಿಯ ಪಿಡಿಒ ಕೃಷ್ಣಪ್ಪ ಅವರನ್ನು ಕೇಂದ್ರದ ಉಸ್ತವಾರಿಗೆ ನಿಯೋಜಿಸಲಾಗಿದ್ದು, ಅಲ್ಲಿ ಏನೇ ಸಮಸ್ಯೆ ಉದ್ಭವಿಸಿದರೂ ಅದಕ್ಕೆ ಪಿಡಿಒ ಅವರನ್ನೇ ಹೊಣೆ ಮಾಡುವುದಾಗಿ ತಹಶೀಲ್ದಾರ್ ಚಂದ್ರಕಾಂತ್, 'ಈಟಿವಿ ಭಾರತ'ಕ್ಕೆ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.