ಗಂಗಾವತಿ : ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್ ಹಾಗೂ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಮತ್ತೊಮ್ಮೆ ಒಂದು ತಿಂಗಳವರೆಗೂ ಕೆಎಸ್‌ಆರ್‌ಟಿಸಿ ವಿಸ್ತರಿಸಿದೆ ಎಂದು ಸಾರಿಗೆ ಇಲಾಖೆ ಸ್ಥಳೀಯ ಘಟಕ ವ್ಯವಸ್ಥಾಪಕ ಸಂಜೀವಮೂರ್ತಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ವಿದ್ಯಾರ್ಥಿಗಳು 2019-20ನೇ ಸಾಲಿನ ಪಾಸಿನ ಆಧಾರದಲ್ಲಿ ಉಚಿತವಾಗಿ ಪ್ರಯಾಣಿಸಲು ಫೆಬ್ರವರಿ 28ರವರೆಗೆ ಅನುವು ಮಾಡಿಕೊಡಲಾಗಿತ್ತು.
ಆದರೆ, ಸರ್ಕಾರಕ್ಕೆ ಸಾಕಷ್ಟು ಮನವಿ ಬಂದ ಹಿನ್ನೆಲೆ ಹಾಗೂ ಇದೀಗ ಶಾಲಾ-ಕಾಲೇಜುಗಳು ಪುನಾರಂಭವಾಗುತ್ತಿರುವ ಹಿನ್ನೆಲೆ ಈ ಅವಧಿಯನ್ನು ಒಂದು ತಿಂಗಳವರೆಗೂ ಅಂದರೆ 2021ರ ಫೆ.28ರವರೆಗೆ ವಿಸ್ತರಿಸಲಾಗಿದೆ ಎಂದರು.
ಪಾಸುಗಳನ್ನು ಪಡೆಯಲು ವಿದ್ಯಾರ್ಥಿಗಳಿಗೆ ಮತ್ತಷ್ಟು ಕಾಲಾವಕಾಶ ನೀಡುವ ಸಲುವಾಗಿ ಮಾರ್ಚ್ 31ರವರೆಗೂ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ತೆರಳಲು ಅವಕಾಶ ಕಲ್ಪಿಸಲಾಗಿದೆ ಎಂದು ಘಟಕದ ವ್ಯವಸ್ಥಾಪಕ ಸಂಜೀವಮೂರ್ತಿ ತಿಳಿಸಿದ್ದಾರೆ.