ಗಂಗಾವತಿ(ಕೊಪ್ಪಳ): ತಾಲೂಕಿನಲ್ಲಿ ಭಾನುವಾರ ಸಂಜೆ ಭಾರಿ ಗಾಳಿ, ಮಳೆಯ ಪರಿಣಾಮ ಕೃಷಿ ಕಾರ್ಯದಲ್ಲಿ ತೊಡಗಿದ್ದ ರೈತನೊಬ್ಬ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ತಾಲೂಕಿನ ಇಂದರಗಿಯಲ್ಲಿ ನಡೆದಿದೆ. ಮೃತ ರೈತನನ್ನು ಶಿವಪ್ಪ ಕಾಸನಕಿಂಡಿ (76) ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಭೇಟಿ ನೀಡಿದ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ, ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿ ಮೃತ ರೈತನ ಕುಟುಂಬಕ್ಕೆ ತಕ್ಷಣ ಐದು ಲಕ್ಷ ರೂಪಾಯಿ ಮೊತ್ತದ ಪರಿಹಾರದ ಚೆಕ್ನ್ನು ಕಂದಾಯ ಇಲಾಖೆಯ ಮೂಲಕ ಕೊಡಿಸುವ ವ್ಯವಸ್ಥೆ ಮಾಡಿದ್ದಾರೆ. ಬಳಿಕ ಹತ್ತು ಸಾವಿರ ರೂಪಾಯಿ ವೈಯಕ್ತಿಕ ಪರಿಹಾರವನ್ನೂ ಸಹ ಶಾಸಕರು ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಕೊಪ್ಪಳ ತಹಶಿಲ್ದಾರ್ ವಿಠ್ಠಲ್ ಚವಗಲ್, ರೈತರ ಅಂತ್ಯ ಸಂಸ್ಕಾರವಾದ ಕೂಡಲೇ ಸರ್ಕಾರದ ಪರಿಹಾರವನ್ನು ನೀಡಲಾಗುವುದು ಎಂದಿದ್ದಾರೆ.
ಇದನ್ನೂ ಓದಿ: ಮದುವೆ ಪ್ರಸ್ತಾಪ ತಿರಸ್ಕರಿಸಿದ ಮಹಿಳೆ: ಏಳು ಜನರ ಸಜೀವ ದಹನಕ್ಕೆ ಕಾರಣವಾದ ಪಾಗಲ್ ಪ್ರೇಮಿ!