ಗಂಗಾವತಿ : ರಸಗೊಬ್ಬರಗಳ ಬೆಲೆ ಏರಿಕೆ ಖಂಡಿಸಿ ತಾಲೂಕಿನ ಆಚಾರ ನರಸಾಪುರ ಗ್ರಾಮದಲ್ಲಿ ರೈತರು ಗೊಬ್ಬರ ಚೀಲಗಳನ್ನು ಹೊತ್ತು ನಿಲ್ಲುವ ಮೂಲಕ ಪ್ರತಿಭಟನೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರೈತ ಮುಖಂಡ ರೆಡ್ಡಿ ನೇತೃತ್ವದಲ್ಲಿ ಗ್ರಾಮದ ರೈತರು ಹೊಲದಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಶ್ರೀನಿವಾಸ್, ರಸಗೊಬ್ಬರಗಳ ಅಗತ್ಯದಿಂದ ಮಾತ್ರ ಬೆಳೆ ಬೆಳೆಯಲು ಸಾಧ್ಯ. ರಸಗೊಬ್ಬರಗಳ ನಿರಂತರ ಬೆಲೆ ಹೆಚ್ಚಳದಿಂದಾಗಿ ರೈತರಿಗೆ ಕಠಿಣ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದರು.
ರೈತ ತಾನು ಬೆಳೆದ ಉತ್ಪನ್ನಕ್ಕೆ ಸೂಕ್ತ ಮಾರುಕಟ್ಟೆಯಲ್ಲಿ ಬೆಲೆ ಸಿಗದೇ ಪರದಾಡುತ್ತಿರುವುದು ಒಂದು ಕಡೆಯಾದರೆ, ರಸಗೊಬ್ಬರ ಸೇರಿದಂತೆ ಇನ್ನಿತರ ವೆಚ್ಚಗಳು ನಿರಂತರ ಏರಿಕೆಯಾಗುತ್ತಿರುವುದು ರೈತರನ್ನು ಕಂಗೆಡುವಂತೆ ಮಾಡುತ್ತಿದೆ. ಕೊನೆಗೆ ರೈತರು ಆತ್ಮಹತ್ಯೆಯಂತಹ ದಾರಿ ಹಿಡಿಯುತ್ತಿದ್ದಾನೆ ಎಂದು ಆರೋಪಿಸಿದರು.
ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ