ಕೊಪ್ಪಳ: ಸಮರ್ಪಕವಾಗಿ ರಸಗೊಬ್ಬರ ಪೂರೈಸುವಂತೆ ಆಗ್ರಹಿಸಿ ರೈತರು ಜಿಲ್ಲೆಯ ಕನಕಗಿರಿಯಲ್ಲಿ ಪ್ರತಿಭಟನೆ ನಡೆಸಿದರು.
ಕನಕಗಿರಿಯ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರೈತರಿಗೆ ಸರಿಯಾಗಿ ರಸಗೊಬ್ಬರ ಸಿಗುತ್ತಿಲ್ಲ. ಕೆಲ ಅಂಗಡಿಗಳಲ್ಲಿ ಹೆಚ್ಚಿನ ದರದಲ್ಲಿ ರಸಗೊಬ್ಬರ ಮಾರಾಟ ಮಾಡಲಾಗುತ್ತಿದೆ ಎಂದು ರೈತರು ಆರೋಪಿಸಿದರು.
ಸದ್ಯ ಮಳೆಯಾಗುತ್ತಿದ್ದು, ಈ ಸಮಯದಲ್ಲಿ ಬೆಳೆಗಳಿಗೆ ರಸಗೊಬ್ಬರ ನೀಡುವುದು ಅಗತ್ಯ. ಹೀಗಾಗಿ ರಸಗೊಬ್ಬರ ಸಮರ್ಪಕವಾಗಿ ಹಾಗೂ ನಿಗದಿತ ಬೆಲೆಯಲ್ಲಿ ಸಿಗುವಂತೆ ವ್ಯವಸ್ಥೆ ಮಾಡಬೇಕೆಂದು ರೈತರು ಆಗ್ರಹಿಸಿದರು.