ETV Bharat / state

ರಸಗೊಬ್ಬರ ಕೊರತೆ: ಸಚಿವರ ಭೇಟಿಯಾದ ಶಾಸಕರ ನಿಯೋಗ

ಕೊಪ್ಫಳ ಜಿಲ್ಲೆ ಸೇರಿದಂತೆ ಗಂಗಾವತಿ, ಕಾರಟಗಿ, ಕನಕಗಿರಿಯಲ್ಲಿ ರಸಗೊಬ್ಬರ ಸಮಸ್ಯೆ ಎದುರಾಗಿದೆ. ಈ ಸಂಬಂಧ ಶಾಸಕರ ನಿಯೋಗ ಕೃಷಿ ಸಚಿವ ಬಿ.ಸಿ. ಪಾಟೀಲರನ್ನು ಭೇಟಿ ಮಾಡಿದೆ.

Gangavati
Gangavati
author img

By

Published : Aug 20, 2020, 5:17 PM IST

ಗಂಗಾವತಿ: ರೈತರು ಕೃಷಿ ಚಟುವಟಕೆ ಕೈಗೊಳ್ಳುತ್ತಿರುವ ಈ ಸಂದರ್ಭದಲ್ಲಿ ಗಂಗಾವತಿ, ಕಾರಟಗಿ, ಕನಕಗಿರಿ ಸೇರಿದಂತೆ ಕೊಪ್ಪಳ ಜಿಲ್ಲೆಯಲ್ಲಿ ರಸಗೊಬ್ಬರಗಳ ಕೊರತೆ ಎದುರಾಗಿದ್ದು, ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ ಅವರನ್ನು ಶಾಸಕರ ನಿಯೋಗ ಒತ್ತಾಯಿಸಿದೆ.

ಕನಕಗಿರಿ ಶಾಸಕ ಬಸವರಾಜ, ಶಾಸಕ ಬಸವರಾಜ ದಢೇಸೂಗೂರು ನೇತೃತ್ವದಲ್ಲಿ ಕುಷ್ಟಗಿಯ ಶಾಸಕ ಅಮರೇಗೌಡ ಭೈಯಾಪುರ, ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್ ಅವರನ್ನು ಒಳಗೊಂಡ ನಿಯೋಗ ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಪಾಟೀಲ ಅವರನ್ನು ಭೇಟಿಯಾಗಿ ಸಮಸ್ಯೆ ವಿವರಿಸಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಸವರಾಜ ದಢೇಸೂಗೂರು, ನೀರಾವರಿ ಪ್ರದೇಶವಾದ ಗಂಗಾವತಿ ಹಾಗೂ ಕಾರಟಗಿ ತಾಲೂಕಿನಲ್ಲಿ ರಸಗೊಬ್ಬರಗಳ ಕೊರತೆ ಅಧಿಕವಾಗಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕು. ಅಲ್ಲದೇ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡುತ್ತಿರುವ ಬಗ್ಗೆಯೂ ರೈತರಿಂದ ಅಸಮಾಧಾನ ವ್ಯಕ್ತವಾಗುತ್ತಿದೆ ಎಂದು ವಿವರಣೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪಾಟೀಲ, ಕೂಡಲೇ ಸಂಬಂಧಿತ ಕೃಷಿ ಇಲಾಖೆಯ ಕಾರ್ಯದರ್ಶಿಗೆ ದೂರವಾಣಿ ಕರೆ ಮಾಡಿ ಕೊಪ್ಪಳ ಜಿಲ್ಲೆಯ ಸಮಸ್ಯೆ ಕೂಡಲೇ ಪರಿಹರಿಸಬೇಕು. ಅಗತ್ಯ ರಸಗೊಬ್ಬರ ದಾಸ್ತಾನಿಗೆ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.