ETV Bharat / state

ಕೊಪ್ಪಳ: ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸೇರಿದ ಕುಟೀರ ಬೆಂಕಿಗಾಹುತಿ

ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಸೇರಿದ ಕುಟೀರ ಬೆಂಕಿಗಾಹುತಿಯಾದ ಘಟನೆ ಕೊಪ್ಪಳದಲ್ಲಿ ನಡೆದಿದೆ.

Etv Bharat
Etv Bharat
author img

By ETV Bharat Karnataka Team

Published : Dec 27, 2023, 3:31 PM IST

Updated : Dec 27, 2023, 5:14 PM IST

ಜನಾರ್ದನ ರೆಡ್ಡಿಗೆ ಸೇರಿದ ಕುಟೀರ ಬೆಂಕಿಗಾಹುತಿ

ಗಂಗಾವತಿ (ಕೊಪ್ಪಳ): ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸೇರಿದ ಕುಟೀರ ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿ ಬಳಿಯ ಪಂಪಾ ಸರೋವರದಲ್ಲಿ ಇಂದು ನಡೆದಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

ಪಂಪಾ ಸರೋವರದಲ್ಲಿರುವ ಜಯಲಕ್ಷ್ಮಿ ದೇವಸ್ಥಾನದ ಜೀರ್ಣೋದ್ಧಾರ ಸಂದರ್ಭದಲ್ಲಿ ಉಳಿದುಕೊಳ್ಳಲು ಈ ಕುಟೀರವನ್ನು ನಿರ್ಮಾಣ ಮಾಡಲಾಗಿತ್ತು. ಶಾರ್ಟ್​ ಸರ್ಕ್ಯೂಟ್​​ನಿಂದ ಬೆಂಕಿ ಅವಘಡ ಸಂಭವಿಸಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಕುಟೀರ ಸಂಪೂರ್ಣ ಸುಟ್ಟು ಕರಕಲಾಗಿದ್ದು ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಗಂಗಾವತಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಇದನ್ನೂ ಓದಿ : ಮಾರತ್ತಹಳ್ಳಿಯಲ್ಲಿ ಭಾರಿ ಅಗ್ನಿ ಅವಘಡ: ಏಣಿ ಹಾಕಿ ಕಟ್ಟಡದಿಂದ ಓರ್ವನ ರಕ್ಷಣೆ, ಮೂವರು ಅಪಾಯದಿಂದ ಪಾರು

Last Updated : Dec 27, 2023, 5:14 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.