ಕೊಪ್ಪಳ: ನಗರದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ.
ನಗರದ ಪಾಂಡುರಂಗ ದೇವಸ್ಥಾನ ಬಳಿ ಇರುವ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಪಂಗಡ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ. ವಸತಿ ನಿಲಯದಲ್ಲಿದ್ದ ಕಂಪ್ಯೂಟರ್ ಸುಟ್ಟು ಹಾನಿಗೊಳಗಾಗಿವೆ.
ಘಟನೆ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಕಾಣಸಿಕೊಂಡಿದ್ದರಿಂದ ವಿದ್ಯಾರ್ಥಿನಿಯರು ಆತಂಕಕ್ಕೆ ಒಳಗಾಗಿದ್ದರು. ಕೊಪ್ಪಳ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ