ಕೊಪ್ಪಳ: ಶಾರ್ಟ್ ಸರ್ಕ್ಯೂಟ್‌ನಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕ ಉಂಟಾದ ಘಟನೆ ಜಿಲ್ಲೆಯ ಯಲಬುರ್ಗಾ ಪಟ್ಟಣದಲ್ಲಿ ನಡೆಯಿತು.
ಯಲಬುರ್ಗಾ ತಾಲೂಕಾಸ್ಪತ್ರೆಯ ರಕ್ತಭಂಡಾರ ಕೋಣೆಯಲ್ಲಿ ಆಕಸ್ಮಿಕ ಬೆಂಕಿ ಕಂಡು ರೋಗಿಗಳು ಭಯದಿಂದ ಹೊರಗೆ ಓಡಿ ಬಂದಿದ್ದಾರೆ.
ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ಯಂತ್ರಗಳು ಬೆಂಕಿಗಾಹುತಿಯಾಗಿವೆ ಎನ್ನಲಾಗುತ್ತಿದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿಸಿದೆ.