ಕೊಪ್ಪಳ : ಜಿಲ್ಲೆಯಲ್ಲಿ ಇಂದು 127 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 8299ಕ್ಕೆ ಏರಿಕೆಯಾಗಿದೆ.
ಗಂಗಾವತಿ ತಾಲೂಕಿನಲ್ಲಿ 42, ಕೊಪ್ಪಳ ತಾಲೂಕಿನಲ್ಲಿ 36, ಕುಷ್ಟಗಿ ತಾಲೂಕಿನಲ್ಲಿ 32 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 17 ಪ್ರಕರಣ ಸೇರಿ ಇಂದು ಒಟ್ಟು 127 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇಂದು 5 ಜನ ಸೋಂಕಿತರು ಸಾವನ್ನಪ್ಪಿದ್ದು ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 191 ಜನ ಸೋಂಕಿತರು ಮೃತಪಟ್ಟಿದ್ದಾರೆ.
![Five death in Koppal from corona](https://etvbharatimages.akamaized.net/etvbharat/prod-images/kn-kpl-05-08-positive-cases-photo-7202284_08092020190716_0809f_1599572236_1087.jpg)
ಇಂದು 186 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 6342 ಜನರು ಗುಣಮುಖರಾಗಿದ್ದಾರೆ. 1485 ಜನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.