ETV Bharat / state

ಕೊಪ್ಪಳದಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅವಘಡ: ವಿದ್ಯುತ್​​​​ ಸ್ಪರ್ಶಿಸಿ ಐವರು ವಿದ್ಯಾರ್ಥಿಗಳ ದುರ್ಮರಣ - ವಿದ್ಯಾರ್ಥಿಗಳಿಗೆ ವಿದ್ಯುತ್ ಸ್ಪರ್ಶ

ಡಿ.ದೇವರಾಜು ಅರಸು ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಐವರು ವಿದ್ಯಾರ್ಥಿಗಳು ವಿದ್ಯುತ್ ಸ್ಪರ್ಶಿಸಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Five students burned with electricity
author img

By

Published : Aug 18, 2019, 8:32 AM IST

Updated : Aug 18, 2019, 10:32 AM IST

ಕೊಪ್ಪಳ: ಬೆಳ್ಳಂಬೆಳಗ್ಗೆ ಧ್ವಜದ ಕಂಬ ತೆರವುಗೊಳಿಸಲು ಹೋಗಿದ್ದ ಐವರು ವಿದ್ಯಾರ್ಥಿಗಳು ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ನಗರದ ಬನ್ನಿಕಟ್ಟಿ ಪ್ರದೇಶದಲ್ಲಿರುವ ಡಿ.ದೇವರಾಜು ಅರಸು ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಈ ದಾರುಣ ಘಟನೆ ಸಂಭವಿಸಿದೆ.

ವಿದ್ಯುತ್​​​​ ಸ್ಪರ್ಶಿಸಿ ಐವರು ವಿದ್ಯಾರ್ಥಿಗಳ ದುರ್ಮರಣ

ವಸತಿ ನಿಲಯದ 10ನೇ ತರಗತಿ ವಿದ್ಯಾರ್ಥಿಗಳಾದ ಮೆತಗಲ್ ಗ್ರಾಮದ ಮಲ್ಲಿಕಾರ್ಜುನ, ಲಿಂಗದಳ್ಳಿ ಗ್ರಾಮದ ಬಸವರಾಜ, 9ನೇ ತರಗತಿ ವಿದ್ಯಾರ್ಥಿಗಳಾದ ಹಲಗೇರಿ ಗ್ರಾಮದ ದೇವರಾಜ, ಹೈದರ್​​ ನಗರದ ಕುಮಾರ ಹಾಗೂ 8ನೇ ತರಗತಿ ವಿದ್ಯಾರ್ಥಿ ಲಾಚನಕೇರಿ ಗ್ರಾಮದ ಗಣೇಶ ಮೃತಪಟ್ಟವರು ಎಂದು ತಿಳಿದು ಬಂದಿದೆ.

ವಿದ್ಯುತ್ ಸ್ಪರ್ಶಿಸಿ ಕ್ಷಣ ಮಾತ್ರದಲ್ಲಿ ವಿದ್ಯಾರ್ಥಿಗಳ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಘಟನೆ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನು ಘಟನೆ ಬಗ್ಗೆ ಮಾಹಿತಿ ಪಡೆದ ಸಿಎಂ ಬಿ.ಎಸ್​.ಯಡಿಯೂರಪ್ಪ, ವಿಷಾದ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಘಟನೆಯಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

Intro:

Body:ಕೊಪ್ಪಳ:- ಕೊಪ್ಪಳ ನಗರದಲ್ಲಿ ಬೆಳ್ಳಂಬೆಳಗ್ಗೆ ದುರಂತವೊಂದು ಸಂಭವಿಸಿದೆ. ವಿದ್ಯುತ್ ಸ್ಪರ್ಶಿಸಿ ಐವರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ನಗರದ ಬನ್ನಿಕಟ್ಟಿ ಪ್ರದೇಶದಲ್ಲಿರುವ ಡಿ. ದೇವರಾಜು ಅರಸು ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಧ್ಚಜ ಕಂಬ ತೆಗೆಯಲು ಹೋಗಿದ್ದ ವಿದ್ಯಾರ್ಥಿಳಿಗೆ ವಿದ್ಯುತ್ ಸ್ಪರ್ಶವಾಗಿದೆ. ಘಟನೆಯಲ್ಲಿ ವಸತಿ ನಿಲಯದ ವಿದ್ಯಾರ್ಥಿಗಳಾದ ೧೦ ನೇ ತರಗತಿ ವಿದ್ಯಾರ್ಥಿಗಳಾದ ಮೆತಗಲ್ ಗ್ರಾಮದ ಮಲ್ಲಿಕಾರ್ಜುನ, ಲಿಂಗದಳ್ಳಿ ಗ್ರಾಮದ ಬಸವರಾಜ, ೯ ನೇ ತರಗತಿ ವಿದ್ಯಾರ್ಥಿಗಳಾದ ಹಲಗೇರಿ ಗ್ರಾಮದ ದೇವರಾಜ, ಹೈದರ ನಗರದ ಕುಮಾರ ಹಾಗೂ ೮ ನೇ ತರಗತಿ ವಿದ್ಯಾರ್ಥಿ ಲಾಚನಕೇರಿ ಗ್ರಾಮದ ಗಣೇಶ ದುರಂತ ಅಂತ್ಯ ಕಂಡಿದ್ದಾರೆ. ವಿದ್ಯುತ್ ಸ್ಪರ್ಶದಿಂದ ಐವರ ದೇವಕ್ಕೆ ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

Conclusion:
Last Updated : Aug 18, 2019, 10:32 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.