ETV Bharat / state

ಗಂಗಾವತಿಯಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಹಾವಳಿ: ಸಾರ್ವಜನಿಕರಿಂದ ಆಕ್ರೋಶ

ಗಂಗಾವತಿ ನಗರದಲ್ಲಿ ನಗರಸಭೆಯ ಅನುಮತಿಯಿಲ್ಲದೆ ಫ್ಲೆಕ್ಸ್ , ಬ್ಯಾನರ್​ಗಳನ್ನು ಹಾಕಲಾಗುತ್ತಿದೆ. ಇದಕ್ಕೆ ಸಾರ್ವಜನಿಕರು ಮತ್ತು ವ್ಯಾಪಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

author img

By

Published : Aug 16, 2020, 7:14 PM IST

Flex,banners
Flex,banners

ಗಂಗಾವತಿ: ನಗರದ ಪ್ರಮುಖ ರಸ್ತೆ, ವೃತ್ತಗಳಲ್ಲಿ ಮತ್ತೆ ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ ಹಾವಳಿ ಆರಂಭವಾಗಿದೆ. ಇದು ಸಾರ್ವಜನಿಕರು, ನಾನಾ ವಲಯದ ವ್ಯಾಪಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.

ನಗರಸಭೆಯಿಂದ ಯಾವುದೇ ಅಧಿಕೃತ ಪರವಾನಿಗೆ ಪಡೆಯದೆ ಸಾರ್ವಜನಿಕ ಸ್ಥಳದಲ್ಲಿ ಫ್ಲೆಕ್ಸ್ ಮತ್ತು ಬ್ಯಾನರ್​​ಗಳನ್ನು ಅಳವಡಿಸಲಾಗುತ್ತಿದೆ. ಇದನ್ನು ಕಂಡರೂ ಅಧಿಕಾರಿಗಳು ಮಾತ್ರ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ. ಹೀಗಾಗಿ ಮಾಸಿಕ ಲಕ್ಷಾಂತರ ರೂಪಾಯಿ ಆದಾಯ ನಗರಸಭೆಯ ಕೈ ತಪ್ಪುತ್ತಿದೆ. ಫ್ಲೆಕ್ಸ್ ಮತ್ತು ಬ್ಯಾನರ್ ಬ್ಯಾನ್ ಮಾಡಿ ಸುಪ್ರೀಂ ಕೋರ್ಟ್ ಆದೇಶ ಮಾಡಿದ್ದರೂ ಕೂಡ ನಗರದಲ್ಲಿ ಮಾತ್ರ ಕಾನೂನು ಪಾಲನೆಯಾಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ.

ನಾನಾ ಸಂಘಟಕರು ಮತ್ತು ರಾಜಕೀಯ ವ್ಯಕ್ತಿಗಳು, ಅವರ ಬೆಂಬಲಿಗರು ಹೆಚ್ಚಿನ ಪ್ರಮಾಣದಲ್ಲಿ ಫ್ಲೆಕ್ಸ್​ ಹಾಕುತ್ತಿದ್ದು, ಪ್ರಭಾವ ಹೊಂದಿರುವವರ ಹಾವಳಿ ಹೆಚ್ಚಾಗಿದ್ದರಿಂದ ಅಧಿಕಾರಿಗಳು ಕ್ರಮಕ್ಕೆ ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ.

ಪ್ರಮುಖ ರಸ್ತೆ, ವೃತ್ತಗಳಲ್ಲಿ ಫ್ಲೆಕ್ಸ್​​ ಅಳವಡಿಸುತ್ತಿರುವುದರಿಂದ ಹಿಂಭಾಗದಲ್ಲಿನ ಅಂಗಡಿ ಮುಂಗಟ್ಟುಗಳು ಜನರಿಗೆ ಕಾಣದಂತಾಗಿ ವ್ಯಾಪಾರಕ್ಕೆ ಧಕ್ಕೆ ಆಗುತ್ತಿದೆ ಎಂದು ವರ್ತಕರು ಅಸಮಾಧಾನ ವ್ಯಕ್ತಪಡಿಸಿದ್ದು, ಕೂಡಲೇ ತೆರವು ಮಾಡುವಂತೆ ನಗರಸಭೆಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.