ಗಂಗಾವತಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಉಡಾನ್ ಯೋಜನೆಯಡಿಯಲ್ಲಿ ಮುಂದಿನ ಏಪ್ರಿಲ್ ತಿಂಗಳಿಂದ ಕೊಪ್ಪಳ ಜಿಲ್ಲೆಯಿಂದಲೇ ವಿಮಾನಯಾನ ಸೇವೆ ಆರಂಭವಾಗಲಿದೆ ಎಂದು ಶಾಸಕ ಪರಣ್ಣ ಮುನವಳ್ಳಿ ತಿಳಿಸಿದ್ದಾರೆ.
ನಗರದ ಎಪಿಎಂಸಿ ಸಭಾಂಗಣದಲ್ಲಿ ನಡೆದ ಉಡಾನ್ ಯೋಜನೆಯ ಅನುಷ್ಠಾನಕ್ಕಾಗಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ನೇತೃತ್ವ ವಹಿಸಿ ಮಾತನಾಡಿದ ಅವರು, ವಿಮಾನಯಾನ ಸೇವೆ ಬಯಸಿ ಈಗಾಗಲೇ ಜಿಲ್ಲೆಯ ಎಲ್ಲಾ ಚುನಾಯಿತರು ಸಿಎಂಗೆ ಮನವಿ ಮಾಡಿದ್ದೇವೆ. ಇದಕ್ಕೆ ಸಿಎಂ ಸಕಾರಾತ್ಮಕವಾಗಿ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದರು.
ಓದಿ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 15 ಲಕ್ಷ ರೂ. ದೇಣಿಗೆ ನೀಡಿದ ಸಚಿವ ಶ್ರೀಮಂತ ಪಾಟೀಲ್
ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ 400 ಎಕರೆ ಜಮೀನು ಖರೀದಿಗೂ ಸಿಎಂ ಭರವಸೆ ನೀಡಿದ್ದಾರೆ. ಅದಕ್ಕೂ ಪೂರ್ವದಲ್ಲಿ ಎಂಎಸ್ಪಿಎಲ್ನಿಂದ ಏಪ್ರಿಲ್ ಮೊದಲ ವಾರದಿಂದಲೇ ನಾಗರಿಕ ವಿಮಾನಯಾನ ಸೇವೆ ಆರಂಭವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.