ಗಂಗಾವತಿ: ಇಲ್ಲಿನ ಹೆಚ್.ಜಿ. ರಾಮುಲು ನಗರದಲ್ಲಿ ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ.
ಕಳೆದ ಕೆಲ ದಿನಗಳಿಂದ ಗ್ರಾಮದ ಸಮೀಪದಲ್ಲಿರುವ ಬೆಟ್ಟದಲ್ಲಿ ಚಿರತೆಗಳು ಓಡಾಡುತ್ತಿದ್ದು, ಇದರಿಂದ ಗ್ರಾಮಸ್ಥರು ಆತಂಕಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಚಿರತೆಯನ್ನು ಸೆರೆ ಹಿಡಿಯುವಂತೆ ಆಗ್ರಹಿಸಿದ್ದರು. ಈ ಸಂಬಂಧ ಕಾರ್ಯಾಚರಣೆಗಿಳಿದ ಅರಣ್ಯಇಲಾಖೆ ಸಿಬ್ಬಂದಿಯು ಬೋನು ಇರಿಸಿದ್ದರು. ಇಂದು ಬೆಳಗ್ಗೆ ಆರು ತಿಂಗಳ ಗಂಡು ಚಿರತೆ ಬೋನಿಗೆ ಬಿದ್ದಿದೆ.
ವಿಷಯ ತಿಳಿದ ಗ್ರಾಮಸ್ಥರು ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.