ಗಂಗಾವತಿ:ಅರಣ್ಯ ಇಲಾಖೆಯ ಪ್ರಾದೇಶಿಕ ವಲಯ ಸಂರಕ್ಷಣಾಧಿಕಾರಿ ಕಚೇರಿಯ ಸಮೀಪ, ಇಲಾಖೆಯ ನಿವೃತ್ತಿ ಅಂಚಿನಲ್ಲಿದ್ದ ನೌಕರನೊಬ್ಬ ನೇಣಿಗೆ ಶರಣಾದ ಘಟನೆ ನಡೆದಿದೆ.
ಆತ್ಮಹತ್ಯೆಗೆ ಖಚಿತವಾದ ಕಾರಣ ತಿಳಿದು ಬಂದಿಲ್ಲ. ಮೃತ ನೌಕರರನ್ನು ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮಲ್ಲಿಕಾರ್ಜುನ (59) ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆ ನೌಕರ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗ್ತಿದೆ. ಮೃತ ನೌಕರ, ಇಲಾಖೆಯ ಕ್ಷೇಮಾಭಿವೃದ್ಧಿ ಯೋಜನೆಯಡಿ ರಾತ್ರಿ ಕಾವಲುಗಾರನಾಗಿ ಸೇವೆ ಸಲ್ಲಿಸುತ್ತಿದ್ದರು.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಇಲ್ಲಿನ ಉಪ ವಿಭಾಗದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಗಂಗಾವತಿ ನಗರ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ಪ್ರಕರಣ ದಾಖಲಾಗಿದೆ.