ಕೊಪ್ಪಳ: ವಯೋಸಹಜ ಕಾಯಿಲೆಯಿಂದ ಮಂಗಳವಾರ ನಿಧನರಾದ ಮಾಜಿ ಸಚಿವ ವಿರೂಪಾಕ್ಷಪ್ಪ ಅಗಡಿ ಅವರ ನಿವಾಸಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಇಂದು(ಬುಧವಾರ) ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಕೊಪ್ಪಳದ ಕಲ್ಯಾಣ ನಗರದಲ್ಲಿರುವ ವಿರೂಪಾಕ್ಷಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ ಅವರು, ತಮ್ಮೊಂದಿಗೆ ಅವರಿಗಿದ್ದ ಒಡನಾಟವನ್ನು ಸ್ಮರಿಸಿದರು. ಅಲ್ಲದೇ, ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಈ ಕುರಿತು ಮಾತನಾಡಿದ ಶೆಟ್ಟರ್, ವಿರೂಪಾಕ್ಷಪ್ಪ ಅವರು ಶಾಸಕರಾಗಿ ಮತ್ತು ಕೆಲವೇ ದಿನಗಳು ಮಾತ್ರ ಸಚಿವರಾಗಿದ್ದರು. ಜನರಿಗೆ ಒಳ್ಳೆಯ ಕೆಲಸ ಮಾಡಿದ್ದರು. ತಾವು ಸಿಎಂ ಆದಾಗ, ಸಚಿವರಾದಾಗ ಕೊಪ್ಪಳದ ಸಾರ್ವಜನಿಕರ ಹಿತಾಸಕ್ತಿ ದೃಷ್ಠಿಯಿಂದ ಒಳ್ಳೆಯ ಕೆಲಸಗಳಿಗಾಗಿ ಭೇಟಿ ಮಾಡುತ್ತಿದ್ದರು ಎಂದು ನೆನಪಿಸಿಕೊಂಡರು.