ETV Bharat / state

ಯಾವ ಸಮುದಾಯಕ್ಕೂ ನ್ಯಾಯ ಕೊಡಿಸದ ಬಿಎಸ್​ವೈ: ಶಿವರಾಜ್ ತಂಗಡಗಿ ಟೀಕೆ

ಬಿಜೆಪಿ ಸರ್ಕಾರ ಆಡಳಿತ ನಡೆಸುವ ಬದಲಿಗೆ ಪ್ರತಿಪಕ್ಷದಲ್ಲಿ ಕೂರಲು ಲಾಯಕ್ಕಿದೆ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಟೀಕಿಸಿದರು.

author img

By

Published : Feb 10, 2021, 10:00 PM IST

Updated : Feb 11, 2021, 11:39 AM IST

former-minister-shivaraj-tangadagi-statement-on-state-and-central-government
ಶಿವರಾಜ್ ತಂಗಡಗಿ

ಕುಷ್ಟಗಿ(ಕೊಪ್ಪಳ): ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರಿಂದ ಯಾವ ಸಮಾಜಕ್ಕೂ ನ್ಯಾಯ ಕೊಡಿಸುವ ಕೆಲಸವಾಗದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ಮಾಜಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ ವಿಷಯದಲ್ಲಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದ್ದಾರೆ. ಅಭಿವೃದ್ಧಿ ಕೆಲಸ ಇಲ್ಲವೇ ಇಲ್ಲ. ವಾಲ್ಮೀಕಿ ಸ್ವಾಮೀಜಿ ಮಾತ್ರವಲ್ಲ, ಎಲ್ಲಾ ಸಮುದಾಯದ ನಾಯಕರು ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಮೀಸಲಾತಿ ಬೇಡಿಕೆಯೇ ಬಿಜೆಪಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದೆ ಎಂದರು.

ಮಾಜಿ ಸಚಿವ ಶಿವರಾಜ್ ತಂಗಡಗಿ

ಇದನ್ನೂ ಓದಿ...ಉಪ್ಪಾರ ಸಮುದಾಯದ ಬೇಡಿಕೆ ಈಡೇರಿಸಲು ಬದ್ದ : ಸಚಿವ ಕೆ.ಎಸ್.​ ಈಶ್ವರಪ್ಪ

ಕೆಟ್ಟು ನಿಂತ ಎಂಜಿನ್ ಸರ್ಕಾರ: ಬಿಜೆಪಿ ಸರ್ಕಾರ ಡಬಲ್ ಎಂಜಿನ್ ಸರ್ಕಾರ ಅಲ್ಲ, ಇಂಜಿನ್ ಇಲ್ಲದ ಸರ್ಕಾರ. ನಮ್ಮ ಭಾಗದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಅಪಾರ ಬೆಳೆ ಹಾನಿಯಾದರೂ ರೈತರಿಗೆ ಈವರೆಗೂ ಪರಿಹಾರ ನೀಡಲಿಲ್ಲ. ಈ ಮೂಲಕ ರೈತರಿಗೆ ಮಂಕುಬೂದಿ ಎರಚುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಈಗ ಜ್ಞಾನೋದಯ: ದೆಹಲಿ ಗಡಿ ಭಾಗದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಸ್ಪಂದಿಸದೆ ನಿರ್ಲಕ್ಷ್ಯ ತೋರುತ್ತಿದೆ. ರೈತರನ್ನು ಭಯೋತ್ಪಾದಕರು, ನಕ್ಸಲರು ಎಂದಿದೆ. ಸದ್ಯ ಅನ್ನದಾತರ ಹೋರಾಟಕ್ಕೆ ಮಣಿದಿರುವ ಪ್ರಧಾನಿ ಮೋದಿ, ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರತಿಭಟನಾ ನಿರತರನ್ನು ಮನವೊಲಿಸುವ ಇಂಗಿತ ವ್ಯಕ್ತಪಡಿಸಿದೆ. ಇದನ್ನು ನೋಡಿದರೆ ಜ್ಞಾನೋದಯವಾದಂತಿದೆ ಎಂದರು.

ಟ್ರ್ಯಾಕ್ಟರ್​ ಜಾಥಾ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಫೆ.12ಕ್ಕೆ ಯಲಬುರ್ಗಾದಲ್ಲಿ, ಫೆ.14 ಗಂಗಾವತಿ, ಫೆ.14ರಂದು ಕೊಪ್ಪಳ ಹಾಗೂ ಕುಷ್ಟಗಿಯಲ್ಲಿ, ಫೆ.15ರಂದು ಕನಕಗಿರಿಯಲ್ಲಿ ಬೃಹತ್ ಟ್ರ್ಯಾಕ್ಟರ್ ಜಾಥಾ ಮೂಲಕ ಪ್ರತಿಭಟಿಸಲಿದ್ದೇವೆ ಎಂದರು.

Last Updated : Feb 11, 2021, 11:39 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.