ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಕೋವಿಡ್ ನಿಯಮ ಪಾಲನೆಯಲ್ಲಿ ಸಾಮಾನ್ಯ ಜನರಿಗೊಂದು ನ್ಯಾಯ, ಉಳ್ಳವರಿಗೊಂದು ನ್ಯಾಯ ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಶ್ರೀ ಹುಲಿಗೆಮ್ಮದೇವಿ ದೇವಸ್ಥಾನದಲ್ಲಿ ಭಕ್ತರ ದರ್ಶನಕ್ಕೆ ನಿಷೇಧವಿದ್ದರೂ ರಾಜಕಾರಣಿಗಳಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.
ನಿಷೇಧವಿದ್ದರೂ ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ್ಗೆ ಹುಲಿಗೆಮ್ಮದೇವಿ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಿರುವುದು ಭಾರಿ ಚರ್ಚೆಗೆ ಕಾರಣವಾಗಿದೆ. ಕೊರೊನಾ ಸೋಂಕಿನ ಮೂರನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ಆಗಸ್ಟ್ 31 ರವರೆಗೆ ತಾಲೂಕಿನ ಹುಲಗಿಯ ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿಷೇಧಿಸಲಾಗಿದೆ.
ಆದರೆ, ನಿಷೇಧದ ನಡುವೆಯೂ ವೀಣಾ ಕಾಶಪ್ಪನವರ್ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ. ಇವರಿಗೆ ಸಂಸದ ಸಂಗಣ್ಣ ಕರಡಿ ಸೊಸೆ ಸಾಥ್ ನೀಡಿದ್ದಾರೆ. ಇದಕ್ಕೆ ಸಾರ್ವಜನಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿದೆ.
ಓದಿ: ರಥವನೇರಿದ ಶ್ರೀ ಗುರು ರಾಘವೇಂದ್ರ ರಾಯರು.. ಮಂತ್ರಾಲಯದಲ್ಲಿ ಉತ್ತರಾರಾಧನೆ ವೈಭವ..