ಕೊಪ್ಪಳ: ಇಂದು ಓರ್ವ ಮಹಿಳೆ ಸೇರಿದಂತೆ ಒಟ್ಟು ನಾಲ್ವರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಯಲಬುರ್ಗಾ ತಾಲೂಕಿನ ಬಳಗೇರಿ ಗ್ರಾಮದ 32 ವರ್ಷದ ವ್ಯಕ್ತಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿತ ಈ ವ್ಯಕ್ತಿ P-7106ರ ಪ್ರಾಥಮಿಕ ಸಂಪರ್ಕಿತನಾಗಿದ್ದಾನೆ.
ಕುಷ್ಟಗಿ ತಾಲೂಕಿನ ತಾವರಗೇರಾ ಗ್ರಾಮದ 27 ವರ್ಷದ ವ್ಯಕ್ತಿ, ತಾಲೂಕಿನ ಮುನಿರಾಬಾದ್ನ 34 ವರ್ಷದ ಜಿಂದಾಲ್ ಉದ್ಯೋಗಿ ಹಾಗೂ ಗಂಗಾವತಿ ತಾಲೂಕಿನ ಹಿರೇಜಂತಕಲ್‌ನ 55 ವರ್ಷದ ಮಹಿಳೆಗೆ ಸೋಂಕು ತಗುಲಿದೆ.
ಸೋಂಕಿತ ಮಹಿಳೆ ಆಂಧ್ರ ಪ್ರದೇಶದ ಆದೋನಿಯಿಂದ ಬಂದಿರುವ ಟ್ರಾವೆಲ್ ಹಿಸ್ಟರಿ ಇದೆ ಎಂದು ಜಿಲ್ಲಾಡಳಿತ ಅಧಿಕೃತ ಮಾಹಿತಿ ನೀಡಿದೆ.
ಸೋಂಕಿತರನ್ನು ಈಗಾಗಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸೋಂಕಿತರ ಪ್ರಾಥಮಿಕ ಹಾಗೂ ದ್ವೀತಿಯ ಸಂಪರ್ಕಿತರನ್ನು ಪತ್ತೆ ಹಚ್ಚಲಾಗುತ್ತಿದೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 33 ಜನರು ಸೋಂಕಿತರು ಪತ್ತೆಯಾಗಿದ್ದು, ಈ ಪೈಕಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. 16 ಜನರು ಗುಣಮುಖರಾಗಿದ್ದು, 16 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.
ಸುಮಾರು 7,634 ಜನರ ಗಂಟಲು ದ್ರವದ ಮಾದರಿ ಸಂಗ್ರಹಿಸಿ ಲ್ಯಾಬ್ಗೆ ಕಳುಹಿಸಲಾಗಿದೆ. ಈ ಪೈಕಿ 7350 ಜನರ ವರದಿ ನೆಗೆಟಿವ್ ಬಂದಿದೆ. 251 ಜನರ ವರದಿ ಇನ್ನೂ ಬರಬೇಕಿದೆ.