ಕೊಪ್ಪಳ: ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ವರಿಗೆ ಕೊರೊನಾ ಸೋಂಕು ತಗುಲಿರೋದು ಖಚಿತವಾಗಿದೆ. ಈ ಕುರಿತಂತೆ ಜಿಲ್ಲಾಡಳಿತ ಅಧಿಕೃತವಾಗಿ ಮಾಹಿತಿ ನೀಡಿದೆ.
ಸೋಂಕಿತರಲ್ಲಿ ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರಿದ್ದಾರೆ. ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರ ಗ್ರಾಮದ 31 ವರ್ಷದ ಪುರುಷ, 41 ವರ್ಷದ ಪುರುಷ, 30 ವರ್ಷದ ಮಹಿಳಾ ಆರೋಗ್ಯ ಸಿಬ್ಬಂದಿ ಹಾಗೂ ಕಾರಟಗಿ ತಾಲೂಕಿನ ತಿಮ್ಮಾಪುರ ಗ್ರಾಮದ 29 ವರ್ಷದ ಮಹಿಳೆಗೆ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಓದಿ:ಕೊಪ್ಪಳದಲ್ಲಿ ಇಂದು 3 ವರ್ಷದ ಮಗು ಸೇರಿ ನಾಲ್ವರಲ್ಲಿ ಕೊರೊನಾ ದೃಢ
ತಿಮ್ಮಾಪುರದ ಸೋಂಕಿತ ಮಹಿಳೆಯು P-5838 ನ ಪ್ರಾಥಮಿಕ ಸಂಪರ್ಕಿತೆಯಾಗಿದ್ದಾಳೆ. ಗಂಗಾವತಿಯ 41 ವರ್ಷದ ಪುರುಷ ಮೂರು ವರ್ಷದ ಮಗು P-7103 ನ ತಂದೆಯಾಗಿದ್ದಾರೆ. ಶ್ರೀರಾಮನಗರದಲ್ಲಿ ಪತ್ತೆಯಾಗಿರುವ ಸೋಂಕಿತ ಉಡುಪಿ ಜಿಲ್ಲೆಯ ಕುಂದಾಪುರದಿಂದ ಬಂದಿರುವ ಮಾಹಿತಿ ಲಭ್ಯವಾಗಿದೆ.
ಆರೋಗ್ಯ ಸಿಬ್ಬಂದಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ. ಈ ಎಲ್ಲ ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಪತ್ತೆ ಕಾರ್ಯ ನಡೆದಿದೆ ಎಂದು ಜಿಲ್ಲಾಡಳಿತ ಹೇಳಿದೆ.