ETV Bharat / state

ಕೊಪ್ಪಳದಲ್ಲಿ ನಾಲ್ವರು ಕೊರೊನಾ ಸೋಂಕಿತರು ಗುಣಮುಖ; ಡಿಸ್ಚಾರ್ಜ್ - ಕೊಪ್ಪಳ

ಕೊಪ್ಪಳದ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಕೊರೊನಾ ಸೋಂಕಿತರು ಗುಣಮುಖರಾಗಿದ್ದು, ಆರೋಗ್ಯ ಇಲಾಖೆ ಹಾಗೂ ಆಸ್ಪತ್ರೆ ಸಿಬ್ಬಂದಿ ಚಪ್ಪಾಳೆ ತಟ್ಟಿ ಬೀಳ್ಕೊಟ್ಟರು.

corona infected people cured
ಕೊಪ್ಪಳದಲ್ಲಿ ನಾಲ್ವರು ಕೊರೊನಾ ಸೋಂಕಿತರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್
author img

By

Published : Jun 13, 2020, 9:07 PM IST

ಕೊಪ್ಪಳ: ಜಿಲ್ಲೆಯಲ್ಲಿ ಇಂದು ನಾಲ್ವರು ಕೊರೊನಾ ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ನಗರದ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು P-5647, P-5835, P-5836 ಹಾಗೂ P- 5837 ಗುಣಮುಖರಾಗಿದ್ದಾರೆ. ಇವರನ್ನು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎಸ್.ಬಿ. ದಾನರೆಡ್ಡಿ ಅವರ ಸಮ್ಮುಖದಲ್ಲಿ ಆರೋಗ್ಯ ಇಲಾಖೆ ಹಾಗೂ ಆಸ್ಪತ್ರೆಯ ಸಿಬ್ಬಂದಿ ಚಪ್ಪಾಳೆ ತಟ್ಟಿ ಬೀಳ್ಕೊಟ್ಟರು.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 13 ಜನ ಸೋಂಕಿತರಲ್ಲಿ 8 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ‌. ಉಳಿದ ಐವರು ಸಕ್ರಿಯ ಸೋಂಕಿತರಿಗೆ ಚಿಕಿತ್ಸೆ ಮುಂದುವರೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.