ಗಂಗಾವತಿ: ದೀಪಾವಳಿ ಹಬ್ಬದ ಅಂಗವಾಗಿ ನಗರ ಸೇರಿದಂತೆ ತಾಲೂಕಿನ ಬಹುತೇಕ ಕಡೆಗಳಲ್ಲಿ ಇಸ್ಪೀಟ್ ಆಟ ಆಡಲಾಗುತ್ತಿದ್ದು, ಪೊಲೀಸ್ ಇಲಾಖೆ ಯಾವುದೇ ಕ್ರಮಕ್ಕೆ ಮುಂದಾಗದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ವಿಶೇಷವಾಗಿ ತಾಲೂಕಿನ ಶ್ರೀರಾಮನಗರದಲ್ಲಿ ಆಂಧ್ರದಿಂದ ಬಂದ ನೂರಾರು ಜೂಜುಕೋರರು, ಕೋಟ್ಯಂತರ ರೂಪಾಯಿ ಮೊತ್ತದ ಹಣವನ್ನು ಜೂಜಾಟಕ್ಕೆ ವಿನಿಯೋಗಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಕಳೆದ ಎರಡು ವರ್ಷದಿಂದ ಸ್ಥಗಿತವಾಗಿದ್ದ ಜೂಜಾಟ ಈ ವರ್ಷ ಮತ್ತೆ ಆರಂಭವಾಗಿರುವುದು ಗ್ರಾಮಸ್ಥರ ಸ್ಥಳೀಯರ ಕೋಪಕ್ಕೆ ಕಾರಣವಾಗಿದೆ.