ಕೊಪ್ಪಳ: ಕುಷ್ಟಗಿ ನ್ಯಾಯಾಲಯದ ಆವರಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಗಂಗಾ ಕುಲಕರ್ಣಿ ಅವರದ್ದು ಎನ್ನಲಾದ ಎರಡು ಪುಟಗಳ ಡೆತ್ ನೋಟ್ ಪತ್ತೆಯಾಗಿದೆ.
ಮರಾಠಿ ಭಾಷೆಯಲ್ಲಿರುವ ಡೆತ್ ನೋಟ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನನ್ನ ಮೇಲೆ ಹಲವಾರು ಕೇಸುಗಳಿವೆ. ನನಗೆ ಇಬ್ಬರು ಮಕ್ಕಳಿದ್ದಾರೆ. ನನ್ನ ಕರ್ಮಕ್ಕೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂಬುದು ಸೇರಿದಂತೆ ಇನ್ನಿತರ ವಿಚಾರಗಳನ್ನು ಆಕೆ ಪ್ರಸ್ತಾಪಿಸಿದ್ದಾರೆ.
ಚಿತ್ರಸಾಹಿತಿ ಕೆ. ಕಲ್ಯಾಣ ದಾಂಪತ್ಯದಲ್ಲಿ ಬಿರುಕು ಮೂಡಿಸಿದ್ದ ಆರೋಪ ಹೊತ್ತಿದ್ದ ಗಂಗಾ ಕುಲಕರ್ಣಿ ಅಲಿಯಾಸ್ ಜ್ಯೋತಿ ಕುಲಕರ್ಣಿ ಕೊಪ್ಪಳದ ಕುಷ್ಟಗಿಯ ನ್ಯಾಯಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.