ಗಂಗಾವತಿ: ನಗರದ ಉಪ ವಿಭಾಗ ಆಸ್ಪತ್ರೆಯಲ್ಲಿ ದಾಖಲಾಗುತ್ತಿರುವ ಕೋವಿಡ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಯಾವುದೇ ಕ್ಷಣದಲ್ಲಿ ಹಾಸಿಗೆ, ಆಮ್ಲಜನಕ ಸಮಸ್ಯೆ ಉಲ್ಬಣವಾಗುವ ಸಾಧ್ಯತೆ ಇದೆ.
ಈಗಾಗಲೇ ಆಸ್ಪತ್ರೆಗೆ 88 ಜನ ಕೊರೊನಾ ಸೋಂಕಿತರು ದಾಖಲಾಗಿದ್ದಾರೆ. ಇವರ ಪೈಕಿ 11 ಜನರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ವೆಂಟಿಲೇಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಉಪ ವಿಭಾಗ ಆಸ್ಪತ್ರೆಯಲ್ಲಿ 100 ಹಾಸಿಗೆಗಳ ಪೈಕಿ 50 ಹಾಸಿಗೆಗಳು ಮೀಸಲಿಡಲಾಗಿದೆ. ತಾಯಿ ಮತ್ತು ಮಗು ಆಸ್ಪತ್ರೆಯಲ್ಲಿ 30 ಬೆಡ್ಗಳು ಮೀಸಲಿಡಲಾಗಿದೆ.
ಇದನ್ನೂ ಓದಿ: ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಐವರು ಮೃತ ... 4ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕ ಸಾವು