ETV Bharat / state

ಹನುಮ ಜಯಂತಿ : ಭಕ್ತರಿಗೆ ಯಾವುದೇ ಕೊರತೆಯಾಗದಂತೆ ನಿಗಾವಹಿಸಲು ಅಧಿಕಾರಿಗಳಿಗೆ ಸೂಚನೆ - ಈಟಿವಿ ಭಾರತ ಕನ್ನಡ

ಡಿಸೆಂಬರ್​ 5ರಂದು ಗಂಗಾವತಿ ತಾಲೂಕಿನ ಅಂಜನಾದ್ರಿಯಲ್ಲಿ ನಡೆಯಲಿರುವ ಹನುಮ ಜಯಂತಿ ಕಾರ್ಯಕ್ರಮಕ್ಕೆ ಲಕ್ಷಾಂತರ ಮಂದಿ ಆಗಮಿಸುತ್ತಿದ್ದು, ಈ ಸಂಬಂಧ ಭಕ್ತರಿಗೆ ಯಾವುದೇ ಕೊರತೆಯಾಗದಂತೆ ನಿಗಾವಹಿಸಲು ಶಾಸಕ ಪರಣ್ಣ ಮುನವಳ್ಳಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

gangavathi-hanuma-jayanthi-program
ಹನುಮ ಜಯಂತಿ : ಭಕ್ತರಿಗೆ ಯಾವುದೇ ಕೊರತೆಯಾಗದಂತೆ ನಿಗಾವಹಿಸಲು ಅಧಿಕಾರಿಗಳಿಗೆ ಸೂಚನೆ
author img

By

Published : Nov 27, 2022, 9:35 PM IST

ಗಂಗಾವತಿ : ಡಿಸೆಂಬರ್​ 5ರಂದು ನಡೆಯಲಿರುವ ಹನುಮ ಜಯಂತಿಗೆ ಒಂದು ಲಕ್ಷಕ್ಕೂ ಅಧಿಕ ಜನ ಭಾಗಿಯಾಗಲಿದ್ದು, ಭಕ್ತರಿಗೆ ಅಗತ್ಯ ಸೌಲಭ್ಯಗಳ ಕೊರತೆಯಾಗದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಶಾಸಕ ಪರಣ್ಣ ಮುನವಳ್ಳಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದ ಮಂಥನ ಸಭಾಂಗಣದಲ್ಲಿ ಪೊಲೀಸ್ ಇಲಾಖೆಯಿಂದ ಭಾನುವಾರ ಸಂಜೆ ಹಮ್ಮಿಕೊಂಡಿದ್ದ ಹನುಮಮಾಲಾ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಶಾಂತಿ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹನುಮ ಜಯಂತಿ ಅಂಗವಾಗಿ ಅಗತ್ಯ ಇರುವ ಸೌಲಭ್ಯಗಳನ್ನು ಮಾಡಬೇಕು. ಎರಡು ದಿನಕ್ಕೊಮ್ಮೆ ಕಡ್ಡಾಯವಾಗಿ ಅಧಿಕಾರಿಗಳು ಸಭೆ ನಡೆಸಿ ಕೆಲಸಗಳ ಪ್ರಗತಿ ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಡಿವೈಎಸ್ಪಿ ಆರ್.ಎಸ್. ಉಜ್ಜನಕೊಪ್ಪ, ನಗರಸಭೆಯ ಕಮೀಷನರ್ ವಿರೂಪಾಕ್ಷಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ : ಗಂಗಾವತಿಗೆ ಐಜಿಪಿ ಲೋಕೇಶ್ ಕುಮಾರ್ ಭೇಟಿ: ಹನುಮ ಜಯಂತಿ ಸಿದ್ಧತೆ ಪರಿಶೀಲನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.