ಗಂಗಾವತಿ: ನಗರದ ಸರ್ಕಾರಿ ಬಾಲಕರ ಜ್ಯೂನಿಯರ್ ಕಾಲೇಜು ಆವರಣದಲ್ಲಿ ನಡೆಯುತ್ತಿರುವ ಕೇಂದ್ರೀಯ ವಿದ್ಯಾಲಯದ ಕಾಮಗಾರಿ ಸ್ಥಗಿತಗೊಳಿಸಿ, ಶಾಲೆಯನ್ನು ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಆಗ್ರಹಿಸಿದೆ.
ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ವ್ಯವಸ್ಥಾಪಕ ಶ್ರೀಧರ್ಗೆ ಮನವಿ ಮಾಡಿರುವ ಸಂಘಟನೆಯ ಕೊಪ್ಪಳ ಜಿಲ್ಲಾಧ್ಯಕ್ಷ ಚಾಂದ್ ಸಲ್ಮಾನ್, ಕೇಂದ್ರೀಯ ವಿದ್ಯಾಲಯದಿಂದಾಗಿ ಶಾಲಾ ಮಕ್ಕಳ ಆಟೋಟ ಮತ್ತು ಚಟುವಟಿಕೆಗಳಿಗೆ ತೀವ್ರ ಸಮಸ್ಯೆಯಾಗಿದೆ.
ಇನ್ನು ಕೆಲವೇ ದಿನಗಳಲ್ಲಿ 2020-2021ನೇ ಶೈಕ್ಷಣಿಕ ವರ್ಷ ಆರಂಭವಾಗಲಿದ್ದು, ಮತ್ತಷ್ಟು ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳವಾಗಿ ಮಕ್ಕಳ ಶೈಕ್ಷಣಿಕ ಚಟುವಟಿಕೆಗೂ ಕೊಠಡಿ ಸಮಸ್ಯೆಯಾಗಲಿದೆ. ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.