ಗಂಗಾವತಿ: ಲಾಕ್ಡೌನ್ ಸಂದರ್ಭದಲ್ಲಿ ನಗರ, ಪಟ್ಟಣ ಪ್ರದೇಶಗಳನ್ನು ತೊರೆದು ಊರು ಸೇರಿದ್ದ ಸಾವಿರಾರು ಯುವಕರ ಪಾಲಿಗೆ ಕೇಂದ್ರ ಸರ್ಕಾರದ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ವರದಾನವಾಗಿದೆ.
ಕೊರೊನಾ ಆತಂಕದಿಂದ ಅತ್ತ ಉದ್ಯೋಗವಿಲ್ಲದೆ ಊರು ಸೇರಿದ್ದ ಯುವಕರು, ತಾಲೂಕಿನ ಆನೆಗೊಂದಿಯ ದುರ್ಗಾದೇವಿ ಕೆರೆ ಸೇರಿದಂತೆ ರೈತರ ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ಕಾಲುವೆಗಳಲ್ಲಿನ ಹೂಳು ತೆಗೆದಿದ್ದಾರೆ.
ಇದೀಗ ಜಲಾಶಯದಿಂದ ನೀರು ಬಿಡಲಾಗಿದ್ದು, ರೈತರ ಹೊಲಕ್ಕೆ ನೀರು ಸರಾಗವಾಗಿ ಹರಿಯುತ್ತಿದೆ. ಅಲ್ಲದೇ ಕಳೆದ ಎರಡು ವಾರದಿಂದ ನಿರಂತರ ಮಳೆಯಾಗುತ್ತಿರುವ ಕಾರಣಕ್ಕೆ ತಾಲೂಕಿನ ಆನೆಗೊಂದಿ ಸಮೀಪದ ದುರ್ಗಾದೇವಿ ಕೆರೆಯಲ್ಲೀಗ ನೀರು ಭರ್ತಿಯಾಗಿದ್ದು, ಜನರ ಗಮನ ಸೆಳೆಯುವಂತೆ ಮಾಡಿದೆ.
ಸ್ಥಳಕ್ಕೆ ತಾಲೂಕು ಪಂಚಾಯಿತಿ ಇಒ ಮೋಹನ್ ಭೇಟಿ ನೀಡಿ ಪರಿಶೀಲಿಸಿದರು.