ಗಂಗಾವತಿ: ಪೂರ್ವನಿಯೋಜನೆಯಂತೆ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಸಿಎಂ ಬಿಎಸ್ವೈ ಪುತ್ರ ಬಿ.ವೈ. ವಿಜಯೇಂದ್ರ ಭೇಟಿ ನೀಡದ ಕಾರಣ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿಗಳು ಪೂಜೆ ಸಲ್ಲಿಸಿದ್ದಾರೆ.
ತಾಲೂಕಿನ ಪವನಸುತನ ದರ್ಶನ ಪಡೆಯಲು ನಿರ್ಧರಿಸಿದ್ದ ಬಿ. ವೈ. ವಿಜಯೇಂದ್ರ ಪ್ರವಾಸದ ದಿನಾಂಕವನ್ನು ನಿಗದಿಗೊಳಿಸಿದ್ದರು. ಈ ಹಿನ್ನೆಲೆ ಬೆಟ್ಟದಲ್ಲಿ ದೇಗುಲದ ಆಡಳಿತ ಮಂಡಳಿ ಹಾಗೂ ಬಿಜಿಪಿ ಪಕ್ಷದ ಯುವ ಮೋರ್ಚಾದ ಪದಾಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದರು.
ಆದರೆ, ಈ ನಡುವೆ ವಿಜಯೇಂದ್ರ ಅವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಹೋಂ ಐಸೋಲೆಷನ್ಗೆ ಒಳಲಾಗಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿಗಳು ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.